ಪುತ್ತೂರು : ರಾಜಸ್ಥಾನದ ಉದಯಪುರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಾಗರಿ ಎನ್ ರೈ ಬಾಲಕಿಯರ ವಿಭಾಗದ ಆರ್ಟಿಸ್ಟಿಕ್ ಯೋಗ ಸ್ಫರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸಲಿರುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಈಕೆ ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ.
ಬಾಲಕರ ವಿಭಾಗದ ಆರ್ಟಿಸ್ಟಿಕ್ ವಿಭಾಗದ ಯೋಗ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ ಜೆ (ಪುತ್ತೂರಿನ ನೆಹರೂನಗರದ ಪಿಎಮ್ಜಿಎಸ್ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ) ದ್ವಿತೀಯ ಸ್ಥಾನ ಗಳಿಸಿದ್ದಾರೆ. ರಿಧಮಿಕ್ ವಿಭಾಗದ ಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ನಿತ್ ಎನ್ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ) ತೃತೀಯ ಸ್ಥಾನ ಗಳಿಸಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.