ಪಡುಮಲೆ:ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ. 25 ರಿಂದ 30 ರವರೆಗೆ ನಡೆಯಲಿದ್ದು ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ  ವಿವಿಧ ಸಮಿತಿ ರಚನೆ, ಆಮಂತ್ರಣ ಪತ್ರಿಕೆ ಹಾಗೂ ಇತರ ಕಾರ್ಯಕ್ರಮದ  ರೂಪುರೇಷೆಗಳ ತಯಾರಿ ಬಗ್ಗೆ ಪೂರ್ವಭಾವಿ ಸಭೆ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕುಡ್ಲುರವರ ಅಧ್ಯಕ್ಷತೆಯಲ್ಲಿ ದ.18 ರಂದು ನಡೆಯಿತು.
ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯ ಉತ್ತಮ್ ಭಟ್ ಕಾರ್ಯಕ್ರಮದ ರೂಪುರೇಷೆಗಳ ಪಟ್ಟಿಯನ್ನು ಸಭೆಯ ಮುಂದಿಟ್ಟರು.
ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ಕುಮಾರ್ ರೈ ಪೇರಾಲು ಉಪಸ್ಥಿತರಿದ್ದರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು,  ಜೀರ್ಣೋದ್ಧಾರ ಬ್ರಹ್ಮ ಕಲಶೋತ್ಸವ  ಸಮಿತಿ ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here