ಪುತ್ತೂರು ತಾಲೂಕು ಗ್ರಾ.ಪಂ. ನೌಕರರಿಂದ ಬೆಳಗಾವಿಯಲ್ಲಿ ಪ್ರತಿಭಟನೆ

0

ಪುತ್ತೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಬೆಳಗಾವಿಯ ಸುವರ್ಣ ಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ಆರಂಭಿಸಿದ್ದು, ಪುತ್ತೂರು ಸೇರಿದಂತೆ ಕರಾವಳಿಯ ಗ್ರಾಮ ಪಂಚಾಯತ್ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.


ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎನ್ನುತ್ತಿರುವಾಗಲೇ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಕಲಾಪ ಸೋಮವಾರದಿಂದ ಆರಂಭವಾಗಿದೆ. ಇದರ ನಡುವೆಯೇ, ಗ್ರಾ. ಪಂ. ನೌಕರರ ಶ್ರೇಯೋಭಿವೃದ್ಧಿ ಸಂಘ ಹೋರಾಟವನ್ನು ಕೈಗೆತ್ತಿಕೊಂಡಿದೆ.

ಬೆಳಗ್ಗಿನಿಂದಲೇ ವಿವಿಧ ಘೋಷಣೆಗಳನ್ನು ಕೂಗುತ್ತಾ, ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂಬ ಆಗ್ರಹ ಪ್ರತಿಭಟನಾಕಾರರಿಂದ ವ್ಯಕ್ತವಾಗುತ್ತಿದೆ. ಸೋಮವಾರ ಮಧ್ಯಾಹ್ನದ ಹೊತ್ತಿಗೆ ಶಾಸಕ, ಮಾಜಿ ಸಚಿವ ಯು.ಟಿ. ಖಾದರ್ ಪ್ರತಿಭಟನಾಕಾರರ ಬಳಿಗೆ ಆಗಮಿಸಿದರು. ನಾಳೆ ಅಂದರೆ ಮಂಗಳವಾರ ಸ್ಪೀಕರ್ ಅವರ ಅನುಮತಿ ಪಡೆದುಕೊಂಡು, ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸಿ ಹಾಗೂ ಡಿ ಗ್ರೂಪ್ ನೌಕರರ ಸ್ಥಾನಮಾನ ನೀಡಬೇಕು. ಇತರ ಸರ್ಕಾರಿ ನೌಕರರಂತೆ ಸೂಕ್ತ ಸ್ಥಾನಮಾನ ನೀಡಬೇಕು. ಪಿಎಫ್, ಇಎಸ್ಐ ಸೌಲಭ್ಯ ನೀಡುವಂತೆ ಬೇಡಿಕೆ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿರ್ಣಯದಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ರಾಜ್ಯ ನೌಕರರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ, ಪ್ರ. ಕಾರ್ಯದರ್ಶಿ ಪದ್ಮನಾಭ ಕುಲಾಲ್, ಜಿಲ್ಲಾ ಸಮಿತಿ ಅಧ್ಯಕ್ಷ ಯಶೋಧರ ಬೆದ್ರ, ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷ ಹೊನ್ನಪ್ಪ ಆರ್ಯಾಪು, ಪ್ರ. ಕಾರ್ಯದರ್ಶಿ ಶಶಿಧರ್ ಮಾವಿನಕಟ್ಟೆ, ಕಾರ್ಯದರ್ಶಿ ಮಮತಾ ಸಂಟ್ಯಾರ್ ಪದಾಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here