ಪುತ್ತೂರು: ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಅಳವಡಿಸಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಹಾನಿ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಅಟಲ್ ಉದ್ಯಾನ ನಾಮಕರಣ ಮಾಡಿ ಅವರ ಭಾವಚಿತ್ರವೊಂದನ್ನು ಅಳವಡಿಸಲಾಗಿತ್ತು. ಡಿ.20 ರಂದು ಹಗಲು ಯಾರೋ ಕಿಡಿಗೇಡಿಗಳು ವಾಜಪೇಯಿ ಭಾವಚಿತ್ರಕ್ಕೆ ಹಾನಿ ಮಾಡಿದ್ದಾರೆ. ಕಿಡಿಗೇಡಿಗಳು ಹಾನಿ ಮಾಡಿದ ಚಿತ್ರಣ ಸ್ಥಳೀಯ ಸಿ ಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಘಟನೆ ಕುರಿತು ನಗರಸಭಾ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಸಿಸಿ ಕ್ಯಾಮರ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.