ನೆಲ್ಯಾಡಿ: ಸಾಮೂಹಿಕ ಸತ್ಯನಾರಾಯಣ ಪೂಜೆ, ನವಜೀವನ ಸದಸ್ಯರ ಸಮಾವೇಶ

0

ನೆಲ್ಯಾಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೆಲ್ಯಾಡಿ ವಲಯ ಇದರ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನವಜೀವನ ಸದಸ್ಯರ ಸಮಾವೇಶ ಡಿ.20 ರಂದು ನೆಲ್ಯಾಡಿ-ಕೌಕ್ರಾಡಿ ಶಬರೀಶ ಕಲಾಮಂದಿರದಲ್ಲಿ ನಡೆಯಿತು.


ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ನಡೆದ ನವಜೀವನ ಸದಸ್ಯರ ಸಮಾವೇಶವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಸ್‌ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮದ್ಯಪಾನ, ಮಾದಕ ವಸ್ತು ಸೇವನೆ ಮಾಡುವ ವ್ಯಕ್ತಿಯಿರುವ ಕುಟುಂಬದಲ್ಲಿ ನೆಮ್ಮದಿ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಈ ದುಶ್ಚಟಗಳಿಗೆ ಬಲಿಯಾಗದಂತೆ ನವಜೀವನ ಸದಸ್ಯರಿಗೆ ಕರೆ ನೀಡಿದರು.

ಧಾರ್ಮಿಕ ಉಪನ್ಯಾಸ ನೀಡಿದ ಉಜಿರೆ ಎಸ್‌ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಮಹಾವೀರ ಜೈನ್ ಇಚ್ಲಂಪಾಡಿಯವರು, ಕೋಪ, ಅಹಂಕಾರ ತ್ಯಜಿಸಿದಲ್ಲಿ ಜೀವನ ಸುಖಮಯ, ಸುಂದರವಾಗಲಿದೆ. ಧರ್ಮಾಚರಣೆ, ಸಾಮರಸ್ಯದ ಜೀವನ ನಮ್ಮದಾಗಬೇಕೆಂದು ಹೇಳಿದರು.

ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಡಾ.ಸದಾನಂದ ಕುಂದರ್, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ನಿಕಟಪೂರ್ವಾಧ್ಯಕ್ಷ ಗಂಗಾಧರ ಶೆಟ್ಟಿಯವರು ಶುಭಹಾರೈಸಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ ಅಧ್ಯಕ್ಷತೆ ವಹಿಸಿದ್ದರು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ತಿಮ್ಮಯ್ಯ, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಪ್ರಗತಿಬಂಧು ಸ್ವಸಹಾಯ ಸಂಘಗಳ ನೆಲ್ಯಾಡಿ ವಲಯಾಧ್ಯಕ್ಷ ಕುಶಾಲಪ್ಪ ಗೌಡ, ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ (ಕೌಕ್ರಾಡಿ), ಸುಮಿತ್ರಾ(ನೆಲ್ಯಾಡಿ), ಚೆನ್ನಪ್ಪ (ಇಚ್ಲಂಪಾಡಿ), ಮಾರ್ಷಲ್ (ಕಟ್ಟೆಮಜಲು), ಸಣ್ಣಿ ಅಡ್ಡಹೊಳೆ(ಅಡ್ಡಹೊಳೆ), ಲೋಕಯ್ಯ (ಪುತ್ತಿಗೆ) ಜಾನ್ ಮೊಂತೆರೋ(ಪಡುಬೆಟ್ಟು), ಸೆಬಾಸ್ಟಿನ್(ಮಾದೇರಿ), ಜನಜಾಗೃತಿ ವೇದಿಕೆ ಪದಾಧಿಕಾರಿಗಳಾದ ತುಕಾರಾಮ ಶೆಟ್ಟಿ, ಅಪ್ಪಚ್ಚನ್, ಮಾಧವ ಇಚ್ಲಂಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಸ್ವಾಗತಿಸಿದರು. ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಕಾರ್ಯಕ್ರಮ ನಿರೂಪಿಸಿದರು.


ಸನ್ಮಾನ:
ಸಮಾಜಸೇವೆಗಾಗಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ನಿಕಟಪೂರ್ವಾಧ್ಯಕ್ಷ ಗಂಗಾಧರ ಶೆಟ್ಟಿ, ನೆಲ್ಯಾಡಿ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನವಜೀವನ ಸದಸ್ಯರಿಗೆ ಶಾಲುಹಾಕಿ, ಹೂ ನೀಡಿ ಗೌರವಿಸಲಾಯಿತು.


ಮಂಜೂರಾತಿ ಪತ್ರ ಹಸ್ತಾಂತರ:
ಕುತ್ರಾಡಿ ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ಥಾನದ ಹೊರಾಂಗಣಕ್ಕೆ ಮೇಲ್ಛಾವಣಿ ಹಾಗೂ ಇಂಟರ್‌ಲಾಕ್ ಅಳವಡಿಕೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1.50 ಲಕ್ಷ ರೂ.ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು. ಪ್ರಾಕೃತಿಕ ವಿಕೋಪದಿಂದ ಮನೆ ಹಾನಿಗೊಂಡ ನೆಲ್ಯಾಡಿ ಗ್ರಾಮದ ಐವನ್ ಡಿ.ಸೋಜ ಹಾಗೂ ರಾಜೇಶ್ವರಿ ಪಡ್ಪಗುಡ್ಡೆ ಅವರಿಗೆ ಮಂಜೂರಾದ ಪರಿಹಾರಧನದ ಮಂಜೂರಾತಿ ಪತ್ರ ಹಸ್ತಾಂತರಿಸಲಾಯಿತು.

LEAVE A REPLY

Please enter your comment!
Please enter your name here