ದ 23:ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

0

ಪುತ್ತೂರು: ಮಾಯಿದೆ ದೇವುಸ್ ಸಮೂಹ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ದ.23 ರಂದು ವಾರ್ಷಿಕೋತ್ಸವ ನಡೆಯಲಿದೆ.

ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪುತ್ತೂರು ನಗರಸಭೆ ಪೌರಾಯುಕ್ತರಾದ ಮಧು ಎಸ್.ಮನೋಹರ್, ಗೌರವ ಅತಿಥಿಗಳಾಗಿ ಫಿಲೋಮಿನಾ ಕಾಲೇಜು ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್‌ರವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮಾಮಚ್ಚನ್ ಎಂ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಜಗಜ್ಜೀವನ್‌ದಾಸ್ ರೈ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ್ ಹೆಗ್ಡೆ, ಕಾರ್ಯದರ್ಶಿ ಪ್ರಫುಲ್ಲ ಜ್ಯೋತ್ಸ್ನಾ ಪಿರೇರಾ, ಜೊತೆ ಕಾರ್ಯದರ್ಶಿ ರಶ್ಮಿ ಎಂ.ಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here