ಪುತ್ತೂರು: ಜ.7 ಹಾಗೂ ೮ರಂದು ಕಿಲ್ಲೆ ಮೈದಾನದಲ್ಲಿ ನಡೆಯುವ ಸುದ್ದಿ ಮಾಹಿತಿ ಟ್ರಸ್ಟ್ ವತಿಯಿಂದ ನಡೆಯುವ ಸಸ್ಯ ಜಾತ್ರೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಸಸ್ಯ ಜಾತ್ರೆಯಲ್ಲಿ ಹಮ್ಮಿಕೊಂಡಿರುವ ವಿಚಾರಗಳ ಬಗ್ಗೆ ತಿಳಿಸಲಾಯಿತು.
ಸಂಸ್ಥೆಯ ಮುಖ್ಯೋಪಾಧ್ಯಾಯನಿ ಪ್ರಮೀಳ ಎನ್.ಡಿ. ವಿದ್ಯಾರ್ಥಿಗಳಿಗೆ ಸಸ್ಯ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ
ವಿಚಾರಧಾರೆಗಳನ್ನು ಹಾಗೂ ಅಭಿಪ್ರಾಯಗಳನ್ನು ಮಕ್ಕಳಿಗೆ ವಿವರಿಸಿದರು. ಸಂಸ್ಥೆಯ ಸಂಚಾಲಕ ಗೋಕುಲ್ ನಾಥ್ ಪಿ. ವಿ. ಮಾತನಾಡಿ ಸಸ್ಯ ಜಾತ್ರೆಯಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನದ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ವಿದ್ಯಾರ್ಥಿಗಳನ್ನು ಸ್ವಯಂಸೇವಕ ತಂಡ, ಸಾಂಸ್ಕೃತಿಕ ತಂಡ, ಕೃಷಿಯಲ್ಲಿ ಆಸಕ್ತ ಇರುವ ತಂಡವನ್ನಾಗಿ ರಚಿಸಲಾಯಿತು. ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.