ಮಂಗಳೂರು:ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ದ.27ರವರೆಗೆ ನಡೆಯಲಿರುವ ಅಂತರ್ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸಂಸದರಾದ ಡಾ|ವೀರೇಂದ್ರ ಹೆಗ್ಗಡೆ ಅವರು ದ.21ರ ಸಂಜೆ ‘ವನಜಾಕ್ಷಿ
ಶ್ರೀಪತಿ ಭಟ್ ವೇದಿಕೆ’ಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್, ವಿಶ್ವ ಸಂಸ್ಥೆಯ ಸ್ಕೌಟ್ ಆಂದೋಲನದ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಲ್ಹೆಂದವಿ, ಶಾಸಕ ಉಮಾನಾಥ ಕೋಟ್ಯಾನ್, ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕುಮಾರ್, ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್‌ನ ರಾಷ್ಟ್ರ ಮಟ್ಟದ ಪದಾಧಿಕಾರಿಗಳಿದ್ದರು. ಪುತ್ತೂರಿನಿಂದಲೂ 1007 ವಿದ್ಯಾರ್ಥಿಗಳು, 180 ಶಿಕ್ಷಕರು ಈ ಜಾಂಬೂರಿಯಲ್ಲಿ ಭಾಗವಹಿಸುತ್ತಿದ್ದು ದ.20ರಂದು ಮೂಡಬಿದ್ರೆಗೆ ತೆರಳಿದ್ದಾರೆ. ಜೊತೆಗೆ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಯಕ್ರಮಕ್ಕೆ ಹಸಿರು ಹೊರೆಕಾಣಿಕೆಯನ್ನೂ ಸಂಗ್ರಹಿಸಿ ಕಳುಹಿಸಲಾಗಿದೆ.