ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸನ್ಮಾನ ರಶ್ಮಿ

0

ಓದುವ ಹವ್ಯಾಸದಿಂದ ಜ್ಞಾನವೃದ್ಧಿ- ನವೀನ್ ಭಂಡಾರಿ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಅಡಿಟೋರಿಯಂನಲ್ಲಿ ದ.22 ರಂದು ಸನ್ಮಾನ ರಶ್ಮಿ ಕಾರ‍್ಯಕ್ರಮ ಜರಗಿತು.

ಕಡಬ ತಾ.ಪಂ ಕಾರ‍್ಯನಿರ್ವಹಣಾಧಿಕಾರಿ ನವೀನ್ ಭಂಡಾರಿರವರು ದೀಪ ಬೆಳಗಿಸಿ, ಉದ್ಘಾಟನೆಗೈದು ಮಾತನಾಡಿ ವಿದ್ಯಾರ್ಥಿಗಳು ಸ್ವರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅತೀವ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ಐಎಎಸ್, ಐಪಿಎಸ್ ಮುಂತಾದ ಪರೀಕ್ಷೆಗಳಲ್ಲಿ ಭಾಗಿಗಳಾಗಿ ಉನ್ನತವಾದ ಶಿಕ್ಷಣವನ್ನು ಪಡೆಯಬೇಕು. ಡಾಕ್ಟರ್, ಇಂಜಿನಿಯರ್ ಆಗುವ ಒಂದೇ ಕನಸನ್ನು ಬಿಟ್ಟು ಇನ್ನಿತರ ಉದ್ಯೋಗಗಳಲ್ಲಿ ಯಶಸ್ಸು ಸಾಧಿಸಬೇಕು ಎಂದು ಹೇಳಿ, ಓದುವ ಹವ್ಯಾಸದಿಂದ ನಮ್ಮ ಜ್ಞಾನ ವೃದ್ಧಿ ಆಗುತ್ತದೆ. ಓದುವ ಪರಿಪಾಠದಿಂದ ನೆನಪು ಶಕ್ತಿ ಜಾಸ್ತಿಯಾಗುತ್ತದೆ ಎಂದು ಹೇಳಿದರು.  ಸಹಕಾರ ರತ್ನ ಸವಣೂರು ಸೀತಾರಾಮ ರೈಯವರು ಸವಣೂರಿನಂಥ ಗ್ರಾಮೀಣ ಭಾಗದಲ್ಲಿ ಎಲ್ಲಾ ಸೌಲಭ್ಯ ಹೊಂದಿರುವ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ದ.ಕ ಜಿಲ್ಲೆಗೆ ಮಾದರಿಯಾಗಿದ್ದಾರೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.

ಉನ್ನತವಾದ ಸಾಧನೆಯನ್ನು ಮಾಡಿ-ಧ್ರುವ ಮುಂಡೋಡಿ

ಮುಖ್ಯ ಅತಿಥಿಯಾದ ವಿದ್ಯಾರಶ್ಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ರುವ ಮುಂಡೋಡಿರವರು ಮಾತನಾಡಿ ವಿದ್ಯಾರ್ಥಿ ಜೀವನ ಎಂಬುದು ಅತ್ಯಂತ ಶ್ರೇಷ್ಠವಾದ ಸಮಯವಾಗಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು, ಉನ್ನತವಾದ ಸಾಧನೆಯನ್ನು ಮಾಡಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿರವರು ಸಂದರ್ಭೋಚಿತವಾಗಿ ಮಾತನಾಡಿದರು.‌

ವೇದಿಕೆಯಲ್ಲಿ ಸಂಸ್ಥೆಯ ಟ್ರಸ್ಟಿ ಸವಣೂರು ಸುಂದರ ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ, ವಿದ್ಯಾರ್ಥಿ ನಾಯಕ ಪ್ರಣವ್ ಉಪಸ್ಥಿತರಿದ್ದರು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಸ್ವಾಗತಿಸಿ, ವಿದ್ಯಾರ್ಥಿನಿ ಶಿಫಾಲಿ ವಂದಿಸಿದರು. ಆಯಿಷತ್ ಕಾರ‍್ಯಕ್ರಮ ನಿರೂಪಸಿದರು.

ಬಹುಮಾನ ವಿತರಣೆ

ವಿವಿಧ ಸ್ವರ್ಧೆಗಳ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ, ಗೌರವಿಸಲಾಯಿತು.

LEAVE A REPLY

Please enter your comment!
Please enter your name here