ಪುತ್ತೂರು: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಬಾಯಾರು ಗುರುವಪ್ಪ (58ವ) ಮೃತಪಟ್ಟವರು. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿದ್ದ ಸಂದರ್ಭ ಗುರುವಪ್ಪ ಬಾಯಾರುರವರಿಗೆ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.