ಕೊರೋನಾ ವೈರಸ್ ಇನ್ನೇನು ಮುಗಿದೇ ಹೋಯಿತು ಎನ್ನುತ್ತಿರುವಾಗಲೇ ಮತ್ತೆ ಚೀನಾದಲ್ಲಿ ಕೋವಿಡ್ ಅಬ್ಬರಿಸುತ್ತಿದ್ದು ವಿಶ್ವದೆಲ್ಲೆಡೆ ಆತಂಕಕ್ಕೆ ಕಾರಣವಾಗಿದೆ. ಕೊರೋನಾ ವೈರಸ್ ಬಿಎಫ್-7 ಸೋಂಕಿನಿಂದಾಗಿ ಚೀನಾದಲ್ಲಿ ಕೋಲಾಹಲ ಉಂಟಾಗಿದೆ. ಈ ಮಧ್ಯೆ ದೇಶದಲ್ಲೂ ಜಾಗರೂಕತೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದ್ದು ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. ಕೋವಿಡ್ ಪ್ರೊಟೋಕಾಲ್ ಅನುಸರಿಸುವಂತೆ ಸೂಚಿಸಲಾಗಿದ್ದು, ಎಲ್ಲರೂ ಮಾಸ್ಕ್ ಬಳಸುವಂತೆ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ವಿದೇಶದಿಂದ ಬರುವ ಪ್ರಯಾಣಿಕರ ರ್ಯಾಂಡಮ್ ಟೆಸ್ಟ್ ಮಾಡಲಾಗುವುದೆಂದು ಸರಕಾರ ತಿಳಿಸಿದೆ.