ಡಿ.25ಕ್ಕೆ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ

0

ಪುತ್ತೂರು : ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಕಾರ್ಯಕ್ರಮ ಡಿ.25 ರಂದು ಬೆಳಗ್ಗಿನಿಂದ ಸಂಜೆ ತನಕ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಸಂಚಾಲಕ ಎ.ವಿ.ನಾರಾಯಣ ಪತ್ರಿಕಾಗೋಷ್ಠಿಯಲಿ ತಿಳಿಸಿದರು.


ಬೆಳಿಗ್ಗೆ 9  ಗಂಟೆಗೆ ಕ್ರೀಡಾಕೂಟವನ್ನು ಊರ ಗೌಡರಾದ ಕೊಡಿಪ್ಪಾಡಿಯ ಪಕ್ರು ಗೌಡ ಅವರು ಉದ್ಘಾಟಿಸಲಿದ್ದಾರೆ. ಬಳಿಕ ಕ್ರೀಡಾ ಸ್ಪರ್ಧೆಗಳು ಆರಂಭಗೊಳ್ಳಲಿದೆ ಎಂದರು. ಪೂರ್ವಾಹ್ನ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ.

ಶಾಸಕ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಗೌಡ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಅವರು ಧ್ವಜಾರೋಹಣ ಮಾಡಲಿದ್ದಾರೆ. ರಾಜ್ಯ ಸಮಾಜ ಕಲ್ಯಾಣ ನಿಗಮದ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿಯ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ತಿಳಿಸಿದರು.

ಸಂಜೆ ಸಮಾರೋಪ ಸಮಾರಂಭ:
ಸಂಜೆ ೫ ಗಂಟೆಗೆ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅವರು ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಸಂಸ್ಥೆಯ ಅಧ್ಯಕ್ಷ ಯು.ಪಿ. ರಾಮಕೃಷ್ಣ, ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ.ಗೌಡ, ಪುತ್ತೂರು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್ ಗೌಡ ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ಮಾಹಿತಿ ನೀಡಿದರು.

ಒಕ್ಕಲಿಗ ಗೌಡ ಸಂಘದ ಪುತ್ತೂರು ನಗರ ಸಮಿತಿಯ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ನಗರ ವಲಯಾಧ್ಯಕ್ಷ ಪ್ರಶಾಂತ್ ಕೆಮ್ಮಾಯಿ, ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ, ವಲಯ ಕಾರ್ಯದರ್ಶಿ ಆನಂದ ಗೌಡ ತೆಂಕಿಲ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

250 ಮಂದಿ ಕ್ರೀಡಾಪಟುಗಳು ಭಾಗಿ
ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವ್ಯಾಪ್ತಿಯ ಒಟ್ಟು 7 ವಲಯಗಳಲ್ಲಿ ನಡೆದ ವಲಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಸುಮಾರು 750 ಮಂದಿ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುವರು.

ಪುರುಷರಿಗೆ ಮ್ಯಾಟ್ ಕಬಡ್ಡಿ,ವಾಲಿಬಾಲ್, ಹಗ್ಗಜಗ್ಗಾಟ, ಕ್ರಿಕೇಟ್, ಮಹಿಳೆಯರಿಗೆ ತ್ರೋಬಾಲ್,ಹಗ್ಗಜಗ್ಗಾಟ,4*100 ಮೀಟರ್ ರಿಲೇ, ಕಬಡ್ಡಿ, ಪ್ರೌಢ ಶಾಲಾ ವಿಭಾಗದಲ್ಲಿ ಬಾಲಕರಿಗೆ ಕಬಡ್ಡಿ, 100 ಮೀ ಮತ್ತು 400 ಮೀಟರ್ ಓಟ, ಬಾಲಕಿಯರಿಗೆ 100 ಮೀಟರ್ ಮತ್ತು 400 ಮೀಟರ್ ಓಟ, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಾಲಕರಿಗೆ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ 4*100 ಮೀಟರ್ ರಿಲೇ, 50  ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಗಂಡೆಸೆತ ಮತ್ತು 100 ಮೀಟರ್ ಓಟದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಎ.ವಿ.ನಾರಾಯಣ, ಸಂಚಾಲಕರು ಕ್ರೀಡಾ ಸಮಿತಿ

LEAVE A REPLY

Please enter your comment!
Please enter your name here