ಪುತ್ತೂರು: ಕೊಂಬೆಟ್ಟು ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವ ನೆಲೆಯಲ್ಲಿ ಮತ್ತು ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ರೂ. 5ಲಕ್ಷ ಅನುದಾನ ನಗರಸಭೆ ವತಿಯಿಂದ ನೀಡುವ ಭರವಸೆಯನ್ನು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ನೀಡಿದ್ದಾರೆ.
ಡಿ.23ರಂದು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಶತಮಾನ ಕಂಡ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವುದು ನನಗೆ ಹೆಮ್ಮೆ ಇದೆ. ಮುಂದೆ ಶಾಲೆಯ ಬೇಡಿಕೆಯಂತೆ ಎದುರು ಭಾಗದ ಮೈದಾನಕ್ಕೆ ಶೀಟ್ ಅಳವಡಿಕೆ ಯೋಜನೆಗೆ ನಗರಸಭೆಯಿಂದ ರೂ. 5ಲಕ್ಷ ನೀಡುವುದಾಗಿ ಭರವಸೆ ನೀಡಿದರು. ಜಿ.ಎಲ್.ಆಚಾರ್ಯ ಜ್ಯುವೆಲ್ಸ್ನ ನಿರ್ದೇಶಕರೂ ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿಯೂ ಆಗಿರುವ ಲಕ್ಷ್ಮೀಕಾಂತ್ ಆಚಾರ್ಯ ಅವರು ಮಾತನಾಡಿ ನಾನು ಈ ಶಾಲೆಯ ಹಿರಿಯ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ಸಂತೋಷ ಆಗುತ್ತಿದೆ ಎಂದರು. ಕೊಂಬೆಟ್ಟು ಸ.ಪ.ಪೂ ಕಾಲೇಜಿನ ಕಾರ್ಯಾಧ್ಯಕ್ಷ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ|ವರದರಾಜ ಚಂದ್ರಗಿರಿ ದಿಕ್ಸೂಚಿ ಭಾಷಣ ಮಾಡಿದರು.
ಸನ್ಮಾನ:
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗು ಹಿರಿಯ ವಿದ್ಯಾರ್ಥಿಗಳಿಂದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಗೀತಾಮಣಿ ಎಸ್, ವರ್ಗಾಣೆಗೊಂಡ ಪ್ರಾಂಶುಪಾಲ ಸುರೇರ್ಶ ಎನ್.ಕೆ ಅವರನ್ನು ಸನ್ಮಾನಿಸಲಾಯಿತು. ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಧರಣಪ್ಪ ಗೌಡ, ಉಪಪ್ರಾಂಶುಪಾಲ ವಸಂತ ಮೂಲ್ಯ, ಶಾಲಾ ನಾಯಕ ಅಂಕಿತ್, ಶಾಲಾ ನಾಯಕಿ ವಾಸ್ತವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮಮತಾ ರೈ ಸ್ವಾಗತಿಸಿ, ಮರ್ಸಿ ಮಮತಾ ಮೋನಿಸ್ ವಂದಿಸಿದರು. ಸಹ ಶಿಕ್ಷಕರಾದ ಶೋಭಾ, ಸ್ಮಿತಾ ಕೆ.ಎಸ್, ಕುಸುಮಾವತಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಡಿ.24ಕ್ಕೆ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ :
ಡಿ.24ರಂದು ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಮತ್ತು ಸ್ಮಾರ್ಟ್ಕ್ಲಾಸ್ ಮತ್ತು ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಧರಣಪ್ಪ ಗೌಡ ಕೆ ತಿಳಿಸಿದ್ದಾರೆ.