ಡಿ.25 ರಿಂದ 30ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ
ಉಪ್ಪಿನಂಗಡಿ: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ, ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ಪೂರ್ಣಾಶೀರ್ವಾದಗಳೊಂದಿಗೆ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ.25 ರಿಂದ ಡಿ.30ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ. ಧನ್ಯಕುಮಾರ್ ರೈ ಬಿಳಿಯೂರುಗುತ್ತು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.30 ರಿಂದ ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪೆರ್ನೆ- ಬಿಳಿಯೂರು ಗ್ರಾಮದ ಭಕ್ತಾಭಿಮಾನಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ.
10 ರಿಂದ 11:30 ರವರೆಗೆ ಭಜನಾ ಕಾರ್ಯಕ್ರಮ ಹಾಗೂ ಶಾಶ್ವತ ಚಪ್ಪರ ಉದ್ಘಾಟನೆ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಜಯರಾಮ ನೆಲ್ಲಿತ್ತಾಯ ಉಗ್ರಾಣ ಮುಹೂರ್ತ ನೆರವೇರಿಸಲಿದ್ದಾರೆ.
ರಾಜ್‌ಬೋರ್‌ವೆಲ್ಸ್ ಮಾಲಕ ಕೃಷ್ಣರಾಜ್ ಭಟ್ ಪಾಕಶಾಲೆ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ 3 ರಿಂದ 4.30 ರವರೆಗೆ ಭಜನಾ ಕಾರ್ಯಕ್ರಮ, ಸಂಜೆ 5:30.ಕ್ಕೆ ಕ್ಷೇತ್ರದ ತಂತ್ರಿಗಳಿಗೆ ಹಾಗೂ ಇತರ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ರಾತ್ರಿ ೭ಕ್ಕೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಆಚಾರ್ಯಾದಿ ಋತ್ವಿಗರಣ, ಪ್ರಾಸಾದಶುದ್ಧಿ, ಅಂಕುರಾರೋಪಣ, ರಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8:30 ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4:30 ರಿಂದ 7 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಡಿ.26 ರಂದು ಬೆಳಗ್ಗೆ 5 ರಿಂದ ಉಷಃ ಪೂಜೆ, ಮಹಾಗಣಪತಿ ಹೋಮ, ಅಂಕುರಪೂಜೆ, ಚತುಃಶುದ್ಧಿ ಧಾರೆ, ಅವಗಾಹ, ಪಂಚಕ ಬಿಂಬಶುದ್ಧಿ, ಖನನಾದಿ ಸ್ಥಳ ಶುದ್ಧಿ, ಪ್ರಾಯಶ್ಚಿತ್ತ ಹೋಮ ನಡೆಯಲಿದ್ದು, ಬೆಳಗ್ಗೆ 10 ಕ್ಕೆ ಉಪ್ಪಿನಂಗಡಿ, ನೆಕ್ಕಿಲಾಡಿ, ಕೋಡಿಂಬಾಡಿ, ಬೆಳ್ಳಿಪ್ಪಾಡಿ ಗ್ರಾಮದ ಭಕ್ತಾದಿಗಳಿಂದ ಹೊರೆಕಾಣಿಕೆ, ಮಧ್ಯಾಹ್ನ 12 ಕ್ಕೆ ಹೋಮಗಳ ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಆಗಮಿಸಲಿದ್ದು, ಅವರಿಗೆ ಪೂರ್ಣಕುಂಭ ಸ್ವಾಗತ ನಡೆಯಲಿದೆ. ಸಂಜೆ 5:30 ರಿಂದ ದೀಪಾರಾಧನೆ, ಅಂಕುರಪೂಜೆ, ಶ್ರೀಚಕ್ರ ಪೂಜೆ, ಕುಂಡಶುದ್ಧಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಭಜನಾ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ ೯:೩೦ಕ್ಕೆ ವಿಠಲ ನಾಯಕ್ ಕಲ್ಲಡ್ಕ ಅವರಿಂದ `ಗೀತಾ ಸಾಹಿತ್ಯ ಸಂಭ್ರಮ’ ನಡೆಯಲಿದೆ.
ಡಿ.27 ರಂದು ಬೆಳಗ್ಗೆ 5 ರಿಂದ ಉಷಃ ಪೂಜೆ, ಮಹಾಗಣಪತಿ ಹೋಮ, ಅಂಕುರಪೂಜೆ, ಸ್ವಶಾಂತಿ, ಶ್ವಾನಶಾಂತಿ, ಅದ್ಭುತ ಶಾಂತಿ, ಚೋರಶಾಂತಿ, ಹೋಮಾದಿಗಳು ನಡೆಯಲಿದ್ದು, ಬೆಳಗ್ಗೆ 10 ಕ್ಕೆ ಕಡೇಶಿವಾಲಯ, ಕೆದಿಲ ವನದುರ್ಗಾ ದೇವಸ್ಥಾನದ ದೇಂತಡ್ಕ, ಅನಂತಾಡಿ, ಮಾಣಿ, ಪೆರಾಜೆ, ಅರಿಕಲ್ಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾನುಪಲ್ಕೆ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಬೆಳಗ್ಗೆ 10ರಿಂದ 11:30ರವರೆಗೆ ಭಜನಾ ಕಾರ್ಯಕ್ರಮ, 12 ಕ್ಕೆ ಹೋಮಗಳ ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ 3 ರಿಂದ 4:30ರವರೆಗೆ ಭಜನಾ ಕಾರ್ಯಕ್ರಮ, ಸಂಜೆ 5: 30 ರಿಂದ ದೀಪಾರಾಧನೆ, ಅಂಕುರಪೂಜೆ, ಕುಂಭೇಶ ಕರ್ಕರೀ ಪೂಜೆ, ಅನುಜ್ಞಾ ಕಲಶ ಪೂಜೆ, ಪರಿಕಲಶ ಪೂಜೆ, ಅಧಿವಾಸ ಹೋಮ, ಕಲಶಾಧಿವಾಸ, ದುರ್ಗಾಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪನೆ ನಡೆಯಲಿದೆ. ರಾತ್ರಿ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ವಿಷ್ಣುಮೂರ್ತಿ ದೇವಾಲಯದ ಆಡಳಿತ ಸಮಿತಿಯ ಸದಸ್ಯ ರೋಹಿತಾಕ್ಷ ಬಾಣಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಡಾ. ತುಕಾರಾಮ ಪೂಜಾರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭ ಆದರ್ಶ ಆಸ್ಪತ್ರೆಯ ಡಾ. ಪ್ರಸಾದ್ ಭಂಡಾರಿಯವರಿಗೆ ಸನ್ಮಾನ ನಡೆಯಲಿದೆ. ರಾತ್ರಿ 9ರಿಂದ ಚಾಪರ್‍ಕ ಕಲಾವಿದರಿಂದ `ನಮಸ್ಕಾರ ಮಾಸ್ಟೇ’ ನಾಟಕ ನಡೆಯಲಿದೆ.
ಡಿ.28 ರಂದು ಬೆಳಗ್ಗೆ ೫ರಿಂದ ಉಷಃ ಪೂಜೆ, ಅಂಕುರಪೂಜೆ, ಮಹಾಗಣಪತಿ ಹೋಮ, ಸೃಷ್ಠಿತತ್ತ್ವ ಹೋಮ, ತತ್ತ್ವಕಲಶ ಪೂಜೆ, ತತ್ತ್ವಕಲಶಾಭಿಷೇಕ, ಮಹಾವಿಷ್ಣುಯಾಗ, ಅನುಜ್ಞಾಕಲಶಾಭಿಷೇಕ ನಡೆಯಲಿದೆ. ಬೆಳಗ್ಗೆ 10 ರಿಂದ 11:30ರವರೆಗೆ ಭಜನಾ ಸೇವೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. 3 ರಿಂದ 4:30ರವರೆಗೆ ಭಜನಾ ಸೇವೆ, ಸಂಜೆ 5 ರಿಂದ ದೀಪಾರಾಧನೆ, ದುರ್ಗಾಪೂಜೆ, ಅಂಕುರಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ರಾತ್ರಿ ೯ರಿಂದ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ `ಮಸ್ತ್ ಮ್ಯಾಜಿಕ್’ ಜಾದೂ ಕಾರ್ಯಕ್ರಮ ನಡೆಯಲಿದೆ.
ಡಿ.29ರಂದು ಬೆಳಗ್ಗೆ ೫ರಿಂದ ಉಷಃ ಪೂಜೆ, ಅಂಕುರಪೂಜೆ, ಮಹಾಗಣಪತಿ ಹವನ, ಮಂಟಪ ಸಂಸ್ಕಾರ, ಅಗ್ನಿಜನನ, ಕುಂಭೇಶ ಕರ್ಕರೀ ಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ ನಡೆಯಲಿದ್ದು, ಬೆಳಗ್ಗೆ 10 ರಿಂದ 11:30ರವರೆಗೆ ಭಜನಾ ಕಾರ್ಯಕ್ರಮ, 12 :30ರಿಂದ ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 3ರಿಂದ 4:30ರವರೆಗೆ ಭಜನಾ ಕಾರ್ಯಕ್ರಮ, 5:30ರಿಂದ ದೀಪಾರಾಧನೆ, ಅಧಿವಾಸ ಹೋಮ, ಕಲಶಾಧಿವಾಸ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಟಪಾಡಿ ಆನೆಗುಂದಿ ಮಹಾಸಂಸ್ಥಾನದ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ರಾತ್ರಿ 9ರಿಂದ ಪೆರ್ನೆಯ ಅಭಿನವ ಡ್ಯಾನ್ಸ್ ಅಕಾಡಮಿಯ ವಿದ್ಯಾರ್ಥಿಗಳಿಂದ `ನೃತ್ಯಲೋಕ’ ನಡೆಯಲಿದೆ.
ಡಿ.30ರಂದು ಬೆಳಗ್ಗೆ ೫ರಿಂದ ಮಹಾಗಣಪತಿ ಹೋಮ, ಬೆಳಗ್ಗೆ 9ರಿಂದ 10:30ರವರೆಗೆ ಭಜನಾ ಕಾರ್ಯಕ್ರಮ, ಬೆಳಗ್ಗೆ 10:16ರಿಂದ 11:02 ರ ವರೆಗೆ ನಡೆಯುವ ಕುಂಭ ಲಗ್ನ ಶುಭಮುಹೂರ್ತದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಹಾಗೂ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಅಷ್ಟಬಂಧ ಕ್ರಿಯೆ, ಬ್ರಹ್ಮಕಲಶಾಭಿಷೇಕ, ಚಂಡಿಕಾಹೋಮ ನಡೆಯಲಿದೆ. ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪಲ್ಲಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 3 ರಿಂದ 4 ರವರೆಗೆ ಭಜನಾ ಸೇವೆ, 4:30ಕ್ಕೆ ಕಳೆಂಜಗುತ್ತಿನಿಂದ ದೈವಗಳ ಭಂಡಾರ ಆಗಮನ, ರಾತ್ರಿ 7 ಕ್ಕೆ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ೯ರಿಂದ ದೈವಗಳಿಗೆ ನೇಮೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷೆ ಪದ್ಮಾಸಿನಿ ಎನ್. ಜೈನ್, ಆಡಳಿತ ಸಮಿತಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ಆಡಳಿತ ಸಮಿತಿಯ ಕಾರ್ಯದರ್ಶಿ ಗೋಪಾಲ ಶೆಟ್ಟಿ ಕಳೆಂಜ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಂಭು ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ಅಶೋಕ್ ಕುಮಾರ್ ಮುಳಿಪಡ್ಪು, ಹೊರೆಕಾಣಿಕೆ ಸಮಿತಿಯ ಸಂಚಾಲಕ ಪ್ರಚಾರ ಸಮಿತಿಯ ಸಂಚಾಲಕ ಮೋಹನ ಶೆಟ್ಟಿ, ನವೀನ್ ಕುಮಾರ್ ಪದಬರಿ, ಪ್ರಮುಖರಾದ ಗೋಪಾಲ ಸಪಲ್ಯ, ಗಂಗಾಧರ ರೈ, ಮಹೇಶ್ ಪಡಿವಾಳ್, ಯಶೋಧಾ ಜಿ. ಗೌಡ ಮತ್ತಿತರರು ಉಪಸ್ಥಿತರಿದ್ದರು.