ಆಲಂಕಾರು: ಆಲಂಕಾರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಯ್ಯಪ್ಪ ಸ್ವಾಮಿ ಮಂದಿರದ ಲೋಕಾರ್ಪಣೆ ಕಾರ್ಯಕ್ರಮ ಡಿ.25 ರಂದು ಲೋಕಾರ್ಪಣೆಗೊಳ್ಳಲಿದೆ.
ಬೆಳಿಗ್ಗೆ ಗಣಹೋಮ ನಡೆದು ನಂತರ ಮಾತೃಶ್ರೀ ಭಜನಾ ಮಂಡಳಿ ಕೊಂಡಾಡಿಕೊಪ್ಪರವರಿಂದ ಭಜನಾ ಕಾರ್ಯಕ್ರಮ ನಡೆದು ಬೆಳಿಗ್ಗೆ 11:00 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಲೋಕಾರ್ಪಣೆಯನ್ನು ದೀಕ್ಷಿತ ಯುವರಾಜ ಗುರುಸ್ವಾಮಿಯವರ ಪತ್ನಿ ಭಾರತಿ ಬೆಳ್ತಂಗಡಿಯವರು ನೆರವೇರಿಸಲಿದ್ದಾರೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಗೋಪಾಲಕೃಷ್ಣ ಪಡ್ಡಿಲ್ಲಾಯ ತೋಟಂತಿಲ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಗಣರಾಜ್ ಕುಂಬ್ಳೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಬುಡೇರಿಯಾ ಶ್ರೀ ಉಳ್ಳಾಲ್ತಿ ಉಳ್ಳಾಕ್ಲು ದೈವಸ್ಥಾನದ ಆಡಳಿತ ಪ್ರಮುಖ ಈಶ್ವರ ಗೌಡ ಪಜ್ಜಡ್ಕ, ಪ್ರಾಸ್ತವಿಕ ಪ್ರವಚನ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸುಳ್ಯ ಅಡ್ಪಂಗಾಯ ಅಯ್ಯಪ್ಪ ಸ್ವಾಮಿ ಮಂದಿರದ ಧರ್ಮದರ್ಶಿ ಶಿವಪ್ರಕಾಶ್ ಗುರುಸ್ವಾಮಿ , ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ದಾಮೋಧರ ಗೌಡ ಕಕ್ವೆ, ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾನಂದ ಆಚಾರ್ಯ, ಹಿರಿಯ ಗುರುಸ್ವಾಮಿ ಹರಿಶ್ಚಂದ್ರ ರೈ ಪಟ್ಟೆಗುತ್ತು, ಕೇಶವ ಆಲಡ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ನೆಕ್ಕಿಲಾಡಿ ಹುಕ್ರ ಮುಗೇರವರ ಧರ್ಮಪತ್ನಿ ಮಂಚೆದಿ ಮತ್ತು ಮಕ್ಕಳನ್ನು ಸನ್ಮಾನಿಸಲಾಗುವುದು ಎಂದು ಆಲಂಕಾರು ಶ್ರೀ ಅಯ್ಯಪ್ಪ ಮಂದಿರದ ಪ್ರಮುಖರಾದ ದೀಕ್ಷಿತ ಎಸ್ ಮೇದಪ್ಪ ಗುರುಸ್ವಾಮಿ ಹಾಗು ಆಯ್ಯಪ್ಪ ಸ್ವಾಮಿ ಮಂದಿರ ಹಾಗು ಭಕ್ತವೃಂದದ ಅಧ್ಯಕ್ಷರು ಹಾಗು ಪದಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.