ನಿಡ್ಪಳ್ಳಿ; ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಓದುವ ಬೆಳಕು ಯೋಜನೆಯಡಿ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ “ಚಿಣ್ಣರ ಚಿತ್ತಾರ” ಚಿತ್ರ ಬಿಡಿಸುವ ಸ್ಪರ್ಧೆಯನ್ನು ಡಿ.3 ರಂದು ನಡೆಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ. ಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು. ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರಾದ ಉಪ್ಪಳಿಗೆ ಸರಕಾರಿ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕ ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೌಮ್ಯ ಎಂ. ಎಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಪಂಚಾಯತ್ ಸದಸ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು. ಗ್ರಂಥಾಲಯ ಮೇಲ್ವಿಚಾರಕಿ ಪ್ರೇಮಲತಾ ಕಾರ್ಯಕ್ರಮ ಆಯೋಜಿಸಿದ್ದರು. ಪಂಚಾಯತ್ ಕಾರ್ಯದರ್ಶಿ ಬಾಬು ನಾಯ್ಕ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮಕ್ಕಳ ಗ್ರಾಮ ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಪ್ರತ್ಯೇಕ ಬಹುಮಾನವನ್ನು ವಿತರಿಸಲಾಯಿತು.