ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಜಾಹಿರಾತಿಗಿಲ್ಲ ತೆರಿಗೆ – ಕೋರ್ಟ್ ಆದೇಶ

0

ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಅಳವಡಿಸಲಾಗುವ ಜಾಹಿರಾತು(ಹೋರ್ಡಿಂಗ್)ಗಳಿಗೆ ತೆರಿಗೆ ವಿಧಿಸುವಂತಿಲ್ಲ. ಮತ್ತು ಈಗಾಗಲೇ ಸಂಗ್ರಹಿಸಿರುವ ತೆರಿಗೆ ಹಣವನ್ನು ವಾಪಸ್ ನೀಡುವಂತೆ ಹೈಕೋರ್ಟ್ ಸರಕಾರಕ್ಕೆ ಆದೇಶಿಸಿದೆ.

ಜಾಹಿರಾತು ತೆರಿಗೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳು ಹೊರಡಿಸಿದ್ದ ೨ ನೋಟೀಸುಗಳನ್ನು ಪ್ರಶ್ನಿಸಿ ದಾವಣಗೆರೆಯ ರಹೀಲ್ ಕಮ್ಯೂನಿಕೇಶನ್ಸ್, ಬೆಂಗಳೂರಿನ ಔಟ್‌ಡೋರ್ ಆಡ್ವರ್ಟೈಸಿಂಗ್ ಅಸೋಸಿಯೇಶನ್ ಮತ್ತಿತರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಪೀಠ ಈ ಆದೇಶ ಹೊರಡಿಸಿದೆ. ಜಾಹಿರಾತು ತೆರಿಗೆಗೆ ಸಂಬಂಧಿಸಿದಂತೆ ಕಾನೂನು ರೂಪಿಸಲು ರಾಜ್ಯ ಸರಕಾರಕ್ಕೆ ಅಧಿಕಾರವಿಲ್ಲ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here