ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಗ್ರಾಣ ಮುಹೂರ್ತ: ಡಿ.26ರಿಂದ ವರ್ಷಾವಧಿ ಜಾತ್ರೋತ್ಸವ

0


ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.೨೬ರಿಂದ ಡಿ.೨೮ರ ವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಡಿ.೨೫ರಂದು ಉಗ್ರಾಣ ಮುಹೂರ್ತನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕೆ.ಎಸ್. ಮುಕ್ಕುಡ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಪ್ರಧಾನ ಕಾರ್ಯದರ್ಶಿ ಪ್ರಪುಲ್ಲಚಂದ್ರ ಪಿ.ಜಿ.ಕೋಲ್ಪೆ ಸಹಿತ ಗ್ರಾಮಸ್ಥರು ಉಪಸ್ಥಿತರಿದ್ದರು.

ಡಿ.೨೬.ರಂದು ಬೆಳಗ್ಗೆ ೧೦೮ಕಾಯಿ ಗಣಪತಿ ಹವನ, ಮದ್ಯಾಹ್ನ ಹವನದ ಪೂರ್ಣಾಹುತಿ, ಪ್ರಸಾದ ವಿತರಣೆ‌‌ ಅನ್ನಸಂತರ್ಪಣೆ ನಡೆಯಲಿದೆ. ಡಿ.೨೭ರಂದು ಬೆಳಗ್ಗೆ ೬ಗಂಟೆಯಿಂದ ಸಾಯಂಕಾಲ ೬ಗಂಟೆಯ ವರೆಗೆ ಅರ್ಧ ಏಕಾಹ ಭಜನೆ ನಡೆಯಲಿದೆ‌. ಬೆಳಗ್ಗೆ ಆಶ್ಲೇಶ ಬಲಿ ಪ್ರಾರಂಭ, ಮಧ್ಯಾಹ್ನ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಪಂಚಮಿ ಬಲಿ ಉತ್ಸವ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ ನಡೆದು‌‌ ಅನ್ನ ಸಂತರ್ಪಣೆ ನಡೆಯಲಿದೆ. ಡಿ.೨೮ರಂದು ಕಿರುಷಷ್ಠಿ ಉತ್ಸವ ನಡೆಯಲಿದೆ. ಬೆಳಗ್ಗೆ ದೇವರ ಬಲಿಹೊರಟು ದರ್ಶಣಬಲಿ, ಬಟ್ಟಲು ಕಾಣಿಕೆ, ನಡೆದು ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

LEAVE A REPLY

Please enter your comment!
Please enter your name here