ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸುರತ್ಕಲ್, ಬಜಪ, ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ/ದಾಸ್ತಾನು/ಸಾಗಾಣಿಕೆ ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಆದೇಶ

0

ಪುತ್ತೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ನ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಾದ ಸುರತ್ಕಲ್, ಬಜಪ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ದ ಪಾತಾವರಣ ಉಂಟಾಗಿದ್ದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ನ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ/ದಾಸ್ತಾನು/ಸಾಗಾಣಿಕೆಯನ್ನು ನಿರ್ಬಂಧಿಸಿ ಹಾಗೂ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಡಿ.೨೫ರ ಬೆಳಿಗ್ಗೆ ೧೦ ಗಂಟೆಯಿಂದ ಡಿ.27ರ ಬೆಳಿಗ್ಗೆ 10 ಗಂಟೆಯವರೆಗೆ ಮುಚ್ಚುವಂತೆ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೆಲವು ಸಮಾಜಘಾತುಕ ವ್ಯಕ್ತಿಗಳು ಮದ್ಯಪಾನ ಮಾಡುವ ಮೂಲಕ ಸಾರ್ವಜನಿಕ ಸೊತ್ತು ನಾಶ, ಹಲ್ಲೆ ಹಾಗೂ ದೊಂಬಿ ನಡೆಸಿ ಸಾರ್ವಜನಿಕ ಶಾಂತಿ ಭಂಗ ಮತ್ತು ಕಾನೂನು ಸುವ್ಯವಸ್ಥೆಗೆ ತೊಡಕುಂಟು ಮಾಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ನ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ/ದಾಸ್ತಾನು/ಸಾಗಾಣಿಕೆಯನ್ನು ನಿರ್ಬಂಧಿಸಿ ಹಾಗೂ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶಿಸುವಂತೆ ಪೊಲೀಸ್ ಆಯುಕ್ತರು, ಮಂಗಳೂರು ನಗರ, ಮಂಗಳೂರು ಇವರು ಉಲ್ಲೇಖಿತ ಪತ್ರದಲ್ಲಿ ಕೋರಿರುತ್ತಾರೆ. ಇವರ ಪ್ರಸ್ತಾವನೆಯನ್ನು ಪರಿಗಣಿಸಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚಿಕೆ ಕ್ರಮ ತೆಗೆದುಕೊಳ್ಳುವ ಅಗತ್ಯತೆಯನ್ನು ಮನಗಂಡು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here