ಗ್ರಾ.ಪಂ ಸದಸ್ಯರು, ಅಧಿಕಾರಿ, ಸಿಬ್ಬಂದಿ, ಸ್ವಸಹಾಯ ಸಂಘ, ಒಕ್ಕೂಟದ ಸದಸ್ಯರಿಗೆ ಸಾಂಘಿಕ ನಡೆ ಸಮೃದ್ಧಿಯ ಕಡೆ – ಒಂದು ದಿನದ ತರಬೇತಿ ಶಿಬಿರ

0

ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜ್ಹೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು, ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ ‘ಪಂಚಾಯತ್ ರಾಜ್ ಸಂಸ್ಥೆ ಮತ್ತು ಸ್ವ ಸಹಾಯ ಸಂಘಗಳ ಒಗ್ಗೂಡಿಸುವಿಕೆ’ ‘ಸಾಂಘಿಕ ನಡೆ ಸಮೃದ್ಧಿಯ ಕಡೆ’ ಕುರಿತು ಗ್ರಾ.ಪಂ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳಿಗೆ ಮತ್ತು ಸ್ವ ಸಹಾಯ ಸಂಘ/ ಒಕ್ಕೂಟದ ಸದಸ್ಯರುಗಳಿಗೆ ಒಂದು ದಿನದ ಮುಖಾ ಮುಖಿ ತರಬೇತಿ ಶಿಬಿರ ಡಿ.27 ರಂದು ಪುತ್ತೂರು ತಾಲೂಕು ಪಂಚಾಯತ್ ಕಿರು ಸಭಾಂಗಣದಲ್ಲಿ ನಡೆಯಿತು.


ತಾ.ಪಂ ಯೋಜನಾಧಿಕಾರಿ ಸುಕನ್ಯ, ಅಬ್ದುಲ್ ನಜ್ಹೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಮಹಮ್ಮದ್ ಬಡಗನ್ನೂರು, ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಮತ್ತು ಹಿರೇಬಂಡಾರಿ ಗ್ರಾ.ಪಂ ಅಧ್ಯಕ್ಷೆ ಚಂದ್ರಾವತಿ ಅವರು ತರಬೇತಿ ಶಿಬಿರವನ್ನು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿ ಪ್ರತಿಮಾ ಸ್ವಾಗತಿಸಿ, ವಂದಿಸಿದರು. ನ್‌ಆರ್‌ಎಲ್‌ಎಂ ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ ಚಾರ್ವಕ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಉದ್ಘಾಟನೆ ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ಮಹಮ್ಮದ್ ಬಡಗನ್ನೂರು ಮತ್ತು ಪ್ರತಿಮಾ ರೈ ಅವರು ತರಬೇತಿ ಕಾರ್ಯಕ್ರಮ ನಡೆಸಿದರು.

LEAVE A REPLY

Please enter your comment!
Please enter your name here