ನೆಲ್ಯಾಡಿ: 2002-03ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲಾ ಪ್ರಶಸ್ತಿ ಪುರಸ್ಕೃತ ಶಾಲೆ, ನೆಲ್ಯಾಡಿ ಗ್ರಾಮದ ಪುಚ್ಚೇರಿ ಸರಕಾರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ’ ಪ್ರತಿಭಾ ಸಿಂಚನ-2022′ ಡಿ.28ರಂದು ಶಾಲಾ ರಂಗಮಂದಿರದಲ್ಲಿ ನಡೆಯಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಬೆಳಿಗ್ಗೆ 9.30ಕ್ಕೆ ಎಸ್‌ಡಿಎಂಸಿ ಅಧ್ಯಕ್ಷ ಮೋಹನ ಪಿ., ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ಪ್ರತಿಭಾ ಸಿಂಚನ ಸಭಾ ಕಾರ್ಯಕ್ರಮ ನಡೆಯಲಿದ್ದು ಸಚಿವ ಎಸ್.ಅಂಗಾರ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷೆ ಚೇತನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್‌ಕುಮಾರ್ ಕೆ.ಎ., ಕಡಬ ತಾಲೂಕು ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ರೈಲ್ವೆ ಇಲಾಖೆಯ ಚೀಫ್ ಟಿಕೆಟ್ ಇನ್ಸ್‌ಪೆಕ್ಟರ್ ಯೇಸುದಾಸ್ ಪಿ.ಟಿ., ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ., ಕೃಷಿಕ ರಾಮ ಭಟ್, ಸಿಆರ್‌ಪಿ ಪ್ರಕಾಶ್ ಬಿ., ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ಆನಂದ ಪಿಲವೂರು, ಶ್ರೀಲತಾ ಸಿ.ಹೆಚ್., ಜಯಂತಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಪಶುವೈದ್ಯಕೀಯ ಪರೀಕ್ಷಕ ಯಾದವ ಪಿ.ಪುಚ್ಚೇರಿ, ಬೆಳ್ತಂಗಡಿ ಠಾಣಾ ಹೆಡ್‌ಕಾನ್ಸ್‌ಟೇಬಲ್ ವಿಶ್ವನಾಥ ನಾಯ್ಕ್, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಭಾಸ್ಕರ ಗೌಡ ಕುಡ್ತಾಜೆ, ಮಂಗಳೂರು ವೆನ್‌ಲಾಕ್ ಆಸ್ಪತ್ರೆ ಸುಶ್ರೂಷಾಧಿಕಾರಿ ಧರ್ಣಮ್ಮ ಪಿಲವೂರು, ಪುತ್ತೂರು ಸರಕಾರಿ ಆಸ್ಪತ್ರೆ ನರ್ಸೀಂಗ್ ಆಫೀಸರ್ ಶಿವಮ್ಮ, ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡ ಅಭಿಜ್ಞಾ ಪಿ.,ಅವರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ:
ರಾತ್ರಿ ೯ ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಾದೇರಿ ಮತ್ತು ಕೊಪ್ಪ ಅಂಗನವಾಡಿ ಪುಟಾಣಿಗಳಿಂದ ಶಾಲಾ ವಿದ್ಯಾರ್ಥಿಗಳಿಂದ ವಿನೂತನ ಶೈಲಿಯ ನೃತ್ಯಗಳು, ರೂಪಕ, ಪ್ರಹಸನ ಹಾಗೂ ಕಾರ್ಯಕ್ರಮ ವೈವಿಧ್ಯ, ಶಾಲಾ ಹೆಮ್ಮೆಯ ಕಲಾವಿದರಿಂದ ಪೌರಾಣಿಕ ಯಕ್ಷಗಾನ ಏಕದಾಶಿ ದೇವಿಮಹಾತ್ಮೆ, ಪೂರ್ವವಿದ್ಯಾರ್ಥಿಗಳು ಹಾಗೂ ಸ್ಥಳೀಯರಿಂದ ವಿನೂತನ ಶೈಲಿಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಊರ ಕಲಾವಿದರಿಂದ ‘ಎದುರುಡು ತೆಲ್ಕೆ ಪಿರವುಡು ಕೊಲ್ಕೆ’ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.