ಭಜನೆ, ಭಜಕರನ್ನು ನಿಂದಿಸಿದ ಆರೋಪಿಯ ಬಂಧನವಾಗದಿದ್ದಲ್ಲಿ ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ – ವಿಹಿಂಪ, ಬಜರಂಗದಳ ಎಚ್ಚರಿಕೆ

0

ಪುತ್ತೂರು: ಭಜನೆ ಮತ್ತು ಭಜಕರ ಕುರಿತು ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ತರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಪೋಸ್ಟ್‌ಗಳನ್ನು ಹಾಕುತ್ತಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಇನ್ನೂ ಬಂಧಿಸಿಲ್ಲ. ಡಿ.28ರ ಸಂಜೆಯೊಳಗೆ ಬಂಧಿಸದಿದ್ದರೆ 5 ಪೊಲೀಸ್ ಠಾಣೆಗಳ ಮುಂಭಾಗದಲ್ಲಿ ಡಿ.29ರಂದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

ಕೊಯಿಲ ಉಪವಲಯ ಅರಣ್ಯಾಧಿಕಾರಿಯಾಗಿರುವ ಸಂಜೀವ ಪೂಜಾರಿ ಸರಕಾರಿ ಉದ್ಯೋಗದಲ್ಲಿದ್ದುಕೊಂಡು ಪ್ರಧಾನಿಯವರು, ಮುಖ್ಯಮಂತ್ರಿ, ಸಂಘಟನೆಗಳು, ಹಿಂದುತ್ವದ ಕುರಿತು ಧಕ್ಕೆ ತರುವಂತಹ ಪೋಸ್ಟ್‌ಗಳನ್ನು ಹಲವು ಸಮಯಗಳಿಂದ ಹಾಕುತ್ತಿದ್ದಾರೆ. ವಿಶೇಷವಾಗಿ ಭಜನೆಯ ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರ ವಿರುದ್ಧ ವಾರದ ಹಿಂದೆ ಪುತ್ತೂರಿನಲ್ಲಿ ಅರಣ್ಯ ಕಚೇರಿಯ ಎದುರು ಪ್ರತಿಭಟನೆ ನಡೆಸಿದಾಗ ಆತನನ್ನು ರಜೆಯ ಮೇಲೆ ಕಳುಹಿಸುವ, ಅಮಾನತು ಮಾಡುವ ಭರವಸೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here