ಉಪ್ಪಿನಂಗಡಿ : ಆಳ್ವಾಸ್ ವಿದ್ಯಾಗಿರಿ ಮೂಡಬಿದಿರೆಯಲ್ಲಿ ನಡೆದ ಅಂತರಾಷ್ಟ್ರೀಯ ಸಾಂಸ್ಕ್ರತಿಕ ಜಾಂಬೂರಿಯಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 7ನೇ ತರಗತಿಯ ವಿದ್ಯಾರ್ಥಿಗಳಾದ ಅಯಾನ ಆಯಿಷಾ ಆಲಿ ಮತ್ತು ಅನುಷ್ಕ ಜೈನ್ ರವರು ಡಿ.25ರಂದು ಡಸ್ಟ್ ಕ್ಯಾಚರ್ ಎಂಬ ವಿಜ್ಞಾನ ಮಾದರಿಯನ್ನು ಮಂಡಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರಿಗೆ ವಿಜ್ಞಾನ ಶಿಕ್ಷಕಿ ಜ್ಯೋತಿ ಕಿರಣ್ ಮಾರ್ಗದರ್ಶನ ನೀಡಿರುತ್ತಾರೆ ಎಂದು ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.