ಡಿ.30: ಉಪ್ಪಿನಂಗಡಿ ಅರಫಾ ಶಾಲಾ ವಾರ್ಷಿಕೋತ್ಸವ’ ಸ್ಕೂಲ್ ಫೆಸ್ಟ್ 2022′

0

ಉಪ್ಪಿನಂಗಡಿ: ಉಪ್ಪಿನಂಗಡಿ ಅರಫಾ ಆಂಗ್ಲಮಾಧ್ಯಮ ಶಾಲಾ ವಾರ್ಷಿಕೋತ್ಸವ ‘ ಸ್ಕೂಲ್ ಫೆಸ್ಟ್ 2022’ ಡಿ.30ರಂದು ಸಂಜೆ ನಡೆಯಲಿದೆ ಎಂದು ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಕೆ.ಪಿ.ಎ.ಸಿದ್ದೀಕ್ ಹಾಜಿ ತಿಳಿಸಿದ್ದಾರೆ.

ಸಂಜೆ 6 ಗಂಟೆಗೆ ಶಾಲಾ ವಾರ್ಷಿಕೋತ್ಸವ ಸಮಾರಂಭವು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ರಾಜೇಶ್ ಕೆ.ವಿ., ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್ ಕೆ.ಬಿ., ನ್ಯಾಯವಾದಿ ನೌಷಾದ್ ಕೆ.ಎಂ., ಹಾಗೂ ಮಠ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಎಂ.ಬಿ.ನಝೀರ್ ಮಠ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here