ದೆಹಲಿ: ಜನವರಿಯಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಲಿದ್ದು ಮುಂದಿನ 40 ದಿನಗಳು ನಿರ್ಣಾಯಕವಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. ದೇಶದಲ್ಲಿ ಕೋವಿಡ್ ಪ್ರಕರಣ ಜಾಸ್ತಿಯಾದರೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ತೀರಾ ಕಡಿಮೆಯಿರುತ್ತದೆ ಎಂದು ಸಚಿವಾಲಯ ತಿಳಿಸಿದೆ.