ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ದತ್ತು ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ ಭರತ ವೈಭವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಶ್ರೀ ರಾಮ ಭಜನಾ ಮಂದಿರದ ಪ್ರತಿಷ್ಟಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ವಿಶೇಷ ಕಾರ್ಯಕ್ರಮವನ್ನು ಪ್ರದರ್ಶಿಸಿದರು.

ಸುಮಾರು ಒಂದು ಗಂಟೆ ಕಾಲ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭರತನಾಟ್ಯ, ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು. ಕಾಲೇಜಿನ ಯಕ್ಷಕಲಾ ಕೇಂದ್ರದ ಸಂಯೋಜಕರಾದ ಪ್ರಶಾಂತ್ ರೈ ಕಾರ್ಯಕ್ರಮ ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಜಯಶಂಕರ್ ರೈ ಬೆದ್ರುಮಾರ್, ಎನ್.ಎಸ್ ಕಿಲ್ಲೆ ಪ್ರತಿಷ್ಠಾನದ ಸದಸ್ಯರಾದ ವಿಜಯಕುಮಾರ್ ರೈ ಕೋರಂಗ, ಮೋಹನ್ ಆಳ್ವ ಮುಂಡಾಲಗುತ್ತು, ವಿಫುಲ್ ರೈ ಕಡಮಜಲು ಉಪಸ್ಥಿತರಿದ್ದರು.

ಫಿಲೋಮಿನಾ ಕಾಲೇಜು, ಕೆದಂಬಾಡಿ ಗ್ರಾಮ ಪಂಚಾಯತ್ ಹಾಗೂ ದೇಶಭಕ್ತ ಎನ್.ಎಸ್ ಕಿಲ್ಲೆ ಪ್ರತಿಷ್ಠಾನದೊಂದಿಗೆ ಒಡಂಬಡಿಕೆ ಪತ್ರಕ್ಕೆ ಈಗಾಗಲೇ ಸಹಿ ಮಾಡಿದ್ದು, ಮುಂದಿನ ದಿನಗಳಲ್ಲಿ ಕಾಲೇಜಿನ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here