ದ.30: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವಿಸ್ತೃತ ಕಟ್ಟಡ ಉದ್ಘಾಟನೆ

0

ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವಿಸ್ತೃತ ಕಟ್ಟಡದ ಉದ್ಘಾಟನೆ ಡಿ.30 ರಂದು ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.

ದ.ಕ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ವಿಸ್ತೃತ ಕಟ್ಟಡ ಉದ್ಘಾಟಿಸಲಿದ್ದಾರೆ. ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು ಅಧ್ಯಕ್ಷತೆ ವಹಿಸಲಿದ್ದಾರೆ.

ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ ಜಯರಾಮ ರೈ ಬಳ್ಳಜ್ಜ, ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ನಿರಂಜನ್ ಬಾವಂತಬೆಟ್ಟು, ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಕೆ, ಸವಿತಾ ಎಸ್.ಶೆಟ್ಟಿ, ದ.ಕ ಹಾಲು ಒಕ್ಕೂಟದ ವ್ಯವಸ್ಥಾಪನಾ ನಿರ್ದೇಶಕ ಡಿ. ಅಶೋಕ್, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ಬೆಳಂದೂರು ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ದ.ಕ ಹಾಲು ಒಕ್ಕೂಟದ ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ದ.ಕ ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ನಿತ್ಯಾನಂದ ಭಕ್ತ, ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ಬಿ.ಎಮ್.ಸಿ ಉಪ ವ್ಯವಸ್ಥಾಪಕ ಡಾ.ಕೇಶವ ಸುಳ್ಳಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು, ಉಪಾಧ್ಯಕ್ಷ ರಾಜೇಶ್ ಮುಂಡಾಳ, ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಗೌಡರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here