ಕಾಣಿಯೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಹಾಗೂ ನೇಮೋತ್ಸವವು ದ. 31ರಿಂದ ಜ. 7ರವರೆಗೆ ನಡೆಯಲಿದೆ.
ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ದ 31ರಂದು ಬೆಳಿಗ್ಗೆ ಅರುವಗುತ್ತು ಮನೆಯಿಂದ ದೇವರ ಆಭರಣ ತರುವುದು, ನಾಲ್ಕಂಭ ಕ್ಷೇತ್ರದಲ್ಲಿ ಪ್ರಾರ್ಥನೆ, ಹೊರೆಕಾಣಿಕೆ ತರುವುದು, ದೇವಳದಲ್ಲಿ ತೋರಣ ಮುಹೂರ್ತ, ಮಹಾಪೂಜೆ, ಸಂಜೆ ತಂತ್ರಿ ಪರಿವಾರದವರ ಆಗಮನ, ಸ್ವಾಗತ, ರಾತ್ರಿ ಪ್ರಸಾದ ಪರಿಗ್ರಹ, ಪುಣ್ಯಾಹ, ಅಂಕುರಾರ್ಪಣೆ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ನ್ಯಾಯವಾದಿ ಯಂ. ವೆಂಕಪ್ಪ ಗೌಡ ಮಾಚಿಲ ವಹಿಸಲಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಸದಸ್ಯ ಮುರಳಿಕೃಷ್ಣ ಹಸಂತಡ್ಕ ನೂತನ ಸಭಾಭವನದ ಉದ್ಘಾಟನೆ ನೆರವೇರಿಸಲಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಚಂದ್ರಕಲಾ ಜಯರಾಂ ಅರುವಗುತ್ತು, ಪುತ್ತೂರು ಪಿಎಂಜಿಎಸ್‌ವೈ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪದ್ಮರಾಜ್ ಗೌಡ ನಾಣಿಲ, ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಮೊಕ್ತೇಸರರಾದ ನಾರ್ಣಪ್ಪ ಗೌಡ ಮಾಚಿಲ, ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಹರಿಯಪ್ಪ ಗೌಡ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಗಣಪತಿ ಭಟ್, ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಪಂಗಡ ಸಂಚಾಲಕ ಸುಂದರ ಗೌಡ ದೇವಸ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಣಿಲ, ಮುದುವ ಅಂಗನವಾಡಿ ಪುಟಾಣಿಗಳು ಹಾಗೂ ನಾಣಿಲ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನೃತ್ಯ ಮತ್ತು ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.
ಜ1ರಂದು ಬೆಳಿಗ್ಗೆ ಗಣಪತಿ ಹೋಮ, ಅಂಕುರಪೂಜೆ ಬಿಂಬಶುದ್ಧಿ, ಕಲಶಪೂಜೆ, ಬಿಂಬಶುದ್ಧಿ ಕಲಶಾಭಿಷೇಕ, ಸ್ಕಂದ ಪ್ರಾಯಶ್ಚಿತ ಹೋಮ, ಪ್ರೋಕ್ಷ ಹೋಮ, ಹೋಮ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಅಂಕುರಪೂಜೆ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮದಲ್ಲಿ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ ಅಧ್ಯಕ್ಷತೆ ವಹಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಕರಂದ್ಲಾಜೆ, ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ಗ್ರಾ.ಪಂ.ಸದಸ್ಯರಾದ ತೇಜಕುಮಾರಿ ಉದ್ಲಡ್ಡ, ವಿಶ್ವನಾಥ ಕೊಪ್ಪ, ಪುತ್ತೂರು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಪ್ಪ ಅಂಗನವಾಡಿ ಕೇಂದ್ರ, ಕೊಪ್ಪ ಕಿರಿಯ ಪ್ರಾಥಮಿಕ ಶಾಲೆ ಮತ್ತು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.
ಜ 2ರಂದು ಬೆಳಿಗ್ಗೆ ಗಣಪತಿ ಹೋಮ, ಶಾಂತಿ ಹೋಮ, ಸ್ವಶಾಂತಿ, ಘೋರ ಶಾಚಿತಿ, ಅದ್ಬುತ ಶಾಂತಿ, ಹೋಮ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಅಂಕುರಪೂಜೆ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶ್ವ ಮೋಹನ ನೃತ್ಯ ಕಲಾ ಶಾಖೆ ಕಡಬ – ಆಲಂಕಾರು ಶಾಖೆಯ ವಿದುಷಿ ಮಾನಸ ಪುನೀತ್ ರೈ ಇವರ ನಿರ್ದೇಶನದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.
ಜ 3ರಂದು ಬೆಳಿಗ್ಗೆ ಗಣಪತಿ ಹೋಮ, ತತ್ವ ಹೋಮ, ತತ್ವ ಕಲಶಪೂಜೆ, ಅನುಜ್ಞಾ ಕಲಶಪೂಜೆ, ತತ್ವಕಲಶಾಭಿಷೇಕ, ಅನುಜ್ಙಾ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಮಂಟಪ ನಮಸ್ಕಾರ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ಉಳ್ಳಾಕುಲು ಮತ್ತು ಶ್ರೀ ಉಳ್ಳಾಲ್ತಿ ಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ, ಅಧಿವಾಸಹೋಮ, ದ್ಯಾನಾದಿವಾಸ ನಡೆಯಲಿದೆ. ಬಳಿಕ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ಸುಳ್ಯ ದೀಪಾಂಜಲಿ ಮಹಿಳಾ ಭಜನಾ ಮಂಡಳಿ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ಹಾಗೂ ಕೂಡುಕಟ್ಟಿನ ಭಕ್ತಾದಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಜ 4ರಂದು ಬೆಳಿಗ್ಗೆ ಶ್ರೀ ಉಳ್ಳಾಕುಲು ಮತ್ತು ಶ್ರೀ ಉಳ್ಳಾಲ್ತಿ ಸ್ಥಾನದಲ್ಲಿ ಗಣಪತಿ ಹೋಮ, ಸಾನಿಧ್ಯ ಕಲಶಪೂಜೆ, ಅನುಜ್ಞಾ ಕಲಶಪೂಜೆ, ಶ್ರೀ ಉಳ್ಳಾಕುಲು ಮತ್ತು ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೇವಸ್ಥಾನದಲ್ಲಿ ಕುಂಬೇಶ ಕರ್ಕರೀ ಕಲಶಪೂಜೆ, ಬ್ರಹ್ಮಕಲಶಪೂಜೆ, ಪರಿಕಲಶಪೂಜೆ, ಕಲಶಾಧಿವಾಸ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ರಾತ್ರಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಇವರಿಂದ ನೃತ್ಯ ವೈಭವ, ಲೋಲಾಕ್ಷ ಮತ್ತು ಬಳಗ ಕಿನ್ನಿಗೋಳಿ ಇವರಿಂದ ಜಾದೂ ಪ್ರದರ್ಶನ ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಪ್ರದೀಪ್ ಆರ್ ಗೌಡ ಅರುವಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಲಿದ್ಧಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಯು.ಪಿ ರಾಮಕೃಷ್ಣ ಗೌಡ, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಉಳ್ಳಾಲ್ತಿ ಕ್ಷೇತ್ರದ ಕ್ಷೇತ್ರೇಶರಾದ ಪೆರ್ಗಡೆ ಗೌಡ ಮಾಚಿಲ, ಗ್ರಾ.ಪಂ.ಸದಸ್ಯರಾದ ಕೀರ್ತಿಕುಮಾರಿ ಅಂಬುಲ, ಗಂಗಮ್ಮ ಗುಜ್ಜರ್ಮೆ, ಮಂಗಳೂರು ಗೋಕರ್ಣನಾಥೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ನ ನಿರ್ದೇಶಕ ವಿಜಯಕುಮಾರ್ ಸೊರಕೆ, ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕ ಪ್ರವೀಣ್ ಕುಂಟ್ಯಾನ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜ 5ರಂದು ಬೆಳಿಗ್ಗೆ ಗಣಪತಿ ಹೋಮ, ಕುಂಭಲಗ್ನದಲ್ಲಿ ಅಷ್ಟಬಂಧ ಲೇಪನ, ಮೀನ ಲಗ್ನದಲ್ಲಿ ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಶ್ರೀ ಭೂತ ಬಲಿ, ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ, ನಾಲ್ಕಂಭ ಕ್ಷೇತ್ರದಲ್ಲಿ ಕಟ್ಟೆ ಪೂಜೆ, ಮಂತ್ರಾಕ್ಷತೆ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಬೆಳಂದೂರು ಲಕ್ಷ್ಮೀಪ್ರಿಯಾ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಜ 6ರಂದು ಶ್ರೀ ಉಳ್ಳಾಕುಲು ಭಂಡಾರ ತೆಗೆಯುವುದು, ರಾತ್ರಿ ಶ್ರೀರಾಗ್ ಮ್ಯೂಸಿಕ್ ಪುತ್ತೂರು- ಮಂಗಳೂರು ಅರ್ಪಿಸುವ ದೀಪಕ್ ರೈ ಪಾಣಾಜೆ ಸಾರಥ್ಯದ ಮಸ್ಕಿರಿ ಕುಡ್ಲ ತಂಡದಿಂದ ತೆಲಿಕೆ ಬಂಜಿ ನಿಲಿಕೆ ಹಾಸ್ಯ ಗೊಂಚಿಲು ಹಾಗೂ ನೃತ್ಯ ಗಾನ ವೈಭವ, ಕಾರ್ಯಕ್ರಮದಲ್ಲಿ ಬ್ರಹ್ಮಕಲಶ ಕಲಾ ಸಂಭ್ರಮ ನಡೆಯಲಿದೆ.
ಜ 7ರಂದು ಬೆಳಿಗ್ಗೆ ಶ್ರೀ ಉಳ್ಳಾಕುಲು ನೇಮೋತ್ಸವ, ಸಂಜೆ ಉಳ್ಳಾಲ್ತಿ ಭಂಡಾರ ತೆಗೆಯುವುದು, ಶ್ರೀ ನಾಲ್ಕಂಭ ಕ್ಷೇತ್ರಕ್ಕೆ ಶ್ರೀ ಉಳ್ಳಾಲ್ತಿ ಭಂಡಾರ ಆಗಮನ, ರಾತ್ರಿ ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ಮೊಕ್ತೇಸರರಾದ ನಾರ್ಣಪ್ಪ ಗೌಡ ಮಾಚಿಲ, ಕ್ಷೇತ್ರೇಶರಾದ ಪೆರ್ಗಡೆ ಗೌಡ ಮಾಚಿಲ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷೆ ಚಂದ್ರಕಲಾ ಜಯರಾಮ್ ಅರುವಗುತ್ತು, ಅಧ್ಯಕ್ಷ ವೆಂಕಪ್ಪ ಗೌಡ ಮಾಚಿಲ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಯು.ಪಿ.ರಾಮಕೃಷ್ಣ ಗೌಡ, ಅಧ್ಯಕ್ಷ ಪ್ರದೀಪ್ .ಆರ್ ಗೌಡ ಅರುವಗುತ್ತು, ಪ್ರಧಾನ ಕಾರ್ಯದರ್ಶಿ ಜತ್ತಪ್ಪ ಗೌಡ ಉದ್ಲಡ್ಡ, ಆಡಳಿತ ಪಂಗಡ ಸಂಚಾಲಕ ಸುಂದರ ಗೌಡ ದೇವಸ್ಯ, ಅರ್ಚಕ ಗಣಪತಿ ಭಟ್‌ರವರು ತಿಳಿಸಿದ್ದಾರೆ.