ಡಿ.31: ಸಾಮೆತ್ತಡ್ಕ ಶಾಲಾ ವಾರ್ಷಿಕೋತ್ಸವ

0

ಪುತ್ತೂರು : ಸಾಮೆತ್ತಡ್ಕ ಹಿ.ಪ್ರಾ ಶಾಲಾ ವಾರ್ಷಿಕೋತ್ಸವ ಡಿ.31ರಂದು ಶಾಲಾ ಅವರಣದಲ್ಲಿ ನಡೆಯಲಿದೆ. ಬೆಳಿಗ್ಗೆ 9ಕ್ಕೆ ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಗೋಪಾಲಕೃಷ್ಣ ಭಟ್‌ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸ್ಮಾರ್ಟ್ ಕ್ಲಾಸ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ನಡೆಯಲಿದೆ. ನಗರಸಭಾಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರಸಭಾ ಸದಸ್ಯರಾದ ಮನೋಹರ್ ಕಲ್ಲಾರೆ ಹಾಗೂ ಬಾಲಚಂದ್ರ, ಬಿಇಒ ಲೋಕೇಶ್ ಎಸ್.ಆರ್, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ನವೀನ್ ವೇಗಸ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಸಮೂಹ ಸಂಪನ್ಮೂಲ ವ್ಯಕ್ತಿ ಶಶಿಕಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಗೌರವ ಉಪಸ್ಥಿತರಿರಲಿದ್ದಾರೆ. ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಡ್ಕ, ಉದ್ಯಮಿ ಪ್ರಸನ್ನ ಶೆಟ್ಟಿ ಸಿಝ್ಲರ್, ಐಆರ್‌ಸಿಎಂಡಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಫುಲ್ಲ ಗಣೇಶ್, ಮಾಜಿ ಪುರಸಭಾ ಉಪಾಧ್ಯಕ್ಷ ಲ್ಯಾನ್ಸಿ ಮಸ್ಕರೇನಸ್, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ದಿನೇಶ್ ಕಾಮತ್ ಹಾಗೂ ಉದ್ಯಮಿ ರೋಷನ್ ರೆಬೆಲ್ಲೋ ಉಪಸ್ಥಿತಿರಲಿದ್ದಾರೆ. ಸಂಜೆ ಶಾಲಾ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here