ಕೊಳ್ನಾಡು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

0

ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.

ಕಟ್ಟತ್ತಿಲ ನಿವಾಸಿ ವಸಂತ ರೈ (52 ವ.) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಸ್ಥಳೀಯ ನಿವಾಸಿಯೋರ್ವರ ರಬ್ಬರ್ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಮೃತರ ತಾಯಿ ಭಾರತಿರವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here