ವಿಟ್ಲ : ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಗುಡ್ಡಕ್ಕೆ ಮೇಯಲು ಬಿಟ್ಟ ಆಡುಗಳು ನಾಪತ್ತೆಯಾಗುತ್ತಿತ್ತು. ಈ ಬಗ್ಗೆ ಎಚ್ಚೆತ್ತ ನಾಗರಿಕರು ಕಳ್ಳರನ್ನು ಪತ್ತೆಹಚ್ಚುವುದಕ್ಕಾಗಿ ಕಾದುಕುಳಿತಿದ್ದರು. ಡಿ.30ರ ಸಾಯಂಕಾಲ ವೇಳೆ ಮರಕ್ಕಿಣಿಯಿಂದ ಆಡು ಕಳ್ಳತನ ಮಾಡಿ ಬರುತ್ತಿದ್ದ ಯುವಕರಿಬ್ಬರನ್ನು ಕೇಪು ಕಲ್ಲಂಗಳ ದ್ವಾರ ಸಮೀಪ ಸಾರ್ವಜನಿಕರ ತಂಡ ರೆಡ್ ಹ್ಯಾಂಡಾಗಿ ಹಿಡಿದು ಬಳಿಕ ವಿಟ್ಲ ಪೊಲೀಸರ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.