ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀಷಣ್ಮುಖದೇವ ದೇವಸ್ಥಾನದ ವಠಾರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರೂ.50 ಲಕ್ಷ ವೆಚ್ಚದ ಶಾಶ್ವತ ತಡೆಗೋಡೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಗುದ್ದಲಿ ಪೂಜೆ ನೆರವೇರಿಸಿದರು. ಕ್ಷೇತ್ರದ ಪ್ರಧಾನ ಅರ್ಚಕ ಜಯರಾಮ ಬಡೆಕಿಲ್ಲಾಯ ಪ್ರಸಾದ ನೀಡಿ ಗೌರವಿಸಿದರು. ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೇಮಿರಾಜ ಪಾಂಬಾರು ಶಾಸಕರಿಗೆ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ಶಾಲು ಹಾಕಿ ಗೌರವಿಸಿದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಉತ್ಸವ ಸಮಿತಿ ಅಧ್ಯಕ್ಷರು ಗ್ರಾಮಸ್ಥರು ಭಾಗವಹಿಸಿದ್ದರು.