








ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀಷಣ್ಮುಖದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನಾ ಸಭೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೇಮಿರಾಜ ಪಾಂಬಾರು ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷರು ಮತ್ತು ಊರಿನ ಭಕ್ತಾದಿಗಳು ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.












