ಹಿರೇಬಂಡಾಡಿ: ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿಯಲ್ಲಿ ’ಜಾಗೃತಿ’ ಗ್ರಾಹಕ ಕ್ಲಬ್ ಉದ್ಘಾಟನೆ ಮತ್ತು ರಾಷ್ಟ್ರೀಯ ಗ್ರಾಹಕ ದಿನಾಚರಣೆ ಡಿ. 24ರಂದು ನಡೆಯಿತು.
ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಶ್ರೀಧರ ಮಠಂದೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಎಲ್ಲಾ ನಾಗರಿಕರು ಜಾಗೃತರಾಗಿ ವ್ಯವಹಾರದಲ್ಲಿ ಉಂಟಾಗುವ ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದು. ಈ ಕುರಿತು ವಿದ್ಯಾರ್ಥಿಗಳು ಸಮಾಜದಲ್ಲಿ ಗ್ರಾಹಕ ಶಿಕ್ಷಣ ನೀಡಿ ಜಾಗೃತಿಯನ್ನು ಉಂಟುಮಾಡುವಂತೆ ತಿಳಿಸಿದರು. ಗಣಿತ ಶಿಕ್ಷಕ ಹರಿಕಿರಣ್ ಕೆ.ರವರು ಮಾತನಾಡಿ, ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿಗಳು ಹಾಗೂ ಗ್ರಾಹಕ ದಿನಾಚರಣೆಯ ಪ್ರಾಮುಖ್ಯತೆಯ ಬಗ್ಗೆ ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ತಿಳಿಸಿದರು. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಶಿಕ್ಷಕಿ ವೇದಾವತಿ ಎ., ರಸಪ್ರಶ್ನೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಶಾಲಾ ’ಜಾಗೃತಿ’ ಗ್ರಾಹಕ ಕ್ಲಬ್ ವತಿಯಿಂದ ಗ್ರಾಹಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿ ಹಂತದಲ್ಲಿಯೇ ಜಾಗೃತರಾಗುವ ಶಿಕ್ಷಣ ನೀಡಲಾಗುವುದು ಎಂದು ತಿಳಿಸಿದರು. ’ಜಾಗೃತಿ’ ಗ್ರಾಹಕ ಕ್ಲಬ್ ಅಧ್ಯಕ್ಷೆ ಗ್ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು. 9ನೇ ತರಗತಿಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪಾಧ್ಯಕ್ಷೆ ಶ್ರೀರಕ್ಷಾ ಸ್ವಾಗತಿಸಿದರು. ಕಾರ್ಯದರ್ಶಿ ಚರಣ್ ವಂದಿಸಿದರು. ಅತಿಥಿ ಶಿಕ್ಷಕರಾದ ಶ್ವೇತಾಕುಮಾರಿ ಮತ್ತು ಆರತಿ ವೈ.ಡಿ.ಸಹಕರಿಸಿದರು.