




ಮಂಡ್ಯ: ನಾವು ಕರ್ನಾಟಕವನ್ನು ಅಭಿವೃದ್ಧಿ ಪಡಿಸುತ್ತೇವೆ, ಕುಟುಂಬ ವಾದ, ಭ್ರಷ್ಟಾಚಾರ ಮುಕ್ತತೆಗಾಗಿ ಬಿಜೆಪಿಗ್ ಪೂರ್ಣ ಬಹುಮತ ಕೊಡಿ ಎಂದು ಕೇಂದ್ರ ಗ್ರಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮಂಡ್ಯದಲ್ಲಿ ಹೇಳಿದ್ದಾರೆ.









ಮಂಡ್ಯದ ಸರಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ಡ. 30ರಂದು ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೇಸ್ ಮತ್ತು ಜೆಡಿಎಸ್ ಕುಟುಂಬದ ರಾಜಕೀಯ ಪಕ್ಷಗಳು. ಕಾಂಗ್ರಸ್ ಬಂದರೆ ದೆಹಲಿಯ ಎಟಿಎಂ ಆಗುತ್ತದೆ. ಜೆಡಿಎಸ್ ಬಂದರೆ ಕುಟಂಬದ ಎಟಿಎಂ ಆಗುತ್ತದೆ. ರಾಜ್ಯದ ಜನರು ಇವೆರಡು ಪಕ್ಷದಿಂದ ಬೇಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಬಿಜೆಪಿಯ ರಾಜ್ಯ ವಕ್ತಾರ ಎಂ.ಜಿ ಮಹೇಶ್ ಅಮಿತ್ ಶಾ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿದರು.









