ಕುಂಬ್ಲಾಡಿ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಮಾಚಿಲ ಶ್ರೀ ಉಳ್ಳಾಕುಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ, ನೇಮೋತ್ಸವ

0

ಹೊರೆ ಕಾಣಿಕೆ ಸಮರ್ಪಣೆ, ಶ್ರೀ ಬಾಲಸುಬ್ರಹ್ಮಣ್ಯ ಸಭಾಭವನ ಉದ್ಘಾಟನೆ-ಧಾರ್ಮಿಕ ಸಭೆ

ಕಾಣಿಯೂರು: ಧಾರ್ಮಿಕ ಕ್ಷೇತ್ರಗಳು ಸಂಸ್ಕಾರ, ಸಂಸ್ಕೃತಿಯನ್ನು ಅನಾವರಣಗೊಳಿಸುವ ಕೇಂದ್ರಗಳಾಗಬೇಕು. ಧಾರ್ಮಿಕ ಜಾಗೃತಿಯೊಂದಿಗೆ ಸಮಾಜವನ್ನು ಒಗ್ಗೂಡಿಸಿಕೊಂಡು ಕ್ಷೇತ್ರವನ್ನು ಬೆಳಗಿಸಬೇಕು ಎಂದು ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಹೇಳಿದರು.


ಅವರು ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಹಾಗೂ ನೇಮೋತ್ಸವದ ಸಂದರ್ಭದಲ್ಲಿ ದ.೩೧ರಂದು ನೂತನ ಶ್ರೀ ಬಾಲಸುಬ್ರಹ್ಮಣ್ಯ ಸಭಾಭವನವನ್ನು ಉದ್ಘಾಟಿಸಿ ಮಾತನಾಡಿದರು. ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಸಾವಿರ ಸಾವಿರ ವರುಷಗಳ ಇತಿಹಾಸವಿರುವ ಧರ್ಮ ನಮ್ಮದ್ದು. ನಮ್ಮ ದೇಶದ ಆತ್ಮ ಹಿಂದೂ ಧರ್ಮ. ಸಂಸ್ಕಾರವಂತ ಸಮಾಜಕ್ಕೆ ನಮ್ಮ ಸಂಸ್ಕೃತಿಯ ಕೊಡುಗೆ ಅಪಾರ. ಮುಂದಿನ ಪೀಳಿಗೆಗೆ ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯದ ಅರಿವು ಮೂಡಿಸುವ ಕೆಲಸ ಆಗಬೇಕು ಎಂದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ನ್ಯಾಯವಾದಿ ಯಂ. ವೆಂಕಪ್ಪ ಗೌಡ ಮಾಚಿಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಊರಿನ ಎಲ್ಲರ ಪರಿಶ್ರಮದಿಂದ ದೇವಸ್ಥಾನ ಅಭಿವೃದ್ಧಿ ಹೊಂದುತ್ತಿದೆ. ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಅತೀ ಅಗತ್ಯವಾಗಿರುವ ಭೋಜನ ಶಾಲೆ ನಿರ್ಮಾಣ ಮಾಡುವ ಯೋಜನೆಯಿದೆ. ಇದು ಇಲಾಖೆ, ಸರಕಾರದ ಕಡೆಯಿಂದ ಆಗಬೇಕಾಗಿದೆ. ಊರಿನ ಪ್ರತಿಯೊಬ್ಬರಿಗೂ ಆಡಳಿತ ಸಿಗಬೇಕು. ಪ್ರತಿಯೊಬ್ಬರಿಗೂ ಅಧಿಕಾರ ನಡೆಸಲು ಗೊತ್ತಾಗಬೇಕು ಎಂಬ ಸಿ.ಪಿ. ಜಯರಾಮ ಗೌಡರ ಕಲ್ಪನೆಯನ್ನು ಅನುಕರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದರು.

ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಚಂದ್ರಕಲಾ ಜಯರಾಂ ಅರುವಗುತ್ತು, ಪುತ್ತೂರು ಪಿಎಂಜಿಎಸ್‌ವೈ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪದ್ಮರಾಜ್ ಗೌಡ ನಾಣಿಲ ಶುಭ ಹಾರೈಸಿದರು.

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಮೊಕ್ತೇಸರರಾದ ನಾರ್ಣಪ್ಪ ಗೌಡ ಮಾಚಿಲ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಹರಿಯಪ್ಪ ಗೌಡ, ಕುಂಬ್ಲಾಡಿಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಗಣಪತಿ ಭಟ್, ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಯು.ಪಿ ರಾಮಕೃಷ್ಣ ಗೌಡ ಗುಜ್ಜರ್ಮೆ, ಅಧ್ಯಕ್ಷ ಪ್ರದೀಪ್ ಆರ್ ಗೌಡ ಅರುವಗುತ್ತು, ಆಡಳಿತ ಪಂಗಡ ಸಂಚಾಲಕ ಸುಂದರ ಗೌಡ ದೇವಸ್ಯ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಪ್ರವೀಣ್ ಕುಂಟ್ಯಾನ, ದೇವಯ್ಯ ಗೌಡ ಖಂಡಿಗ, ವಿಜಯಕುಮಾರ್ ಸೊರಕೆ, ಕಾರ್ಯದರ್ಶಿ ಜತ್ತಪ್ಪ ಗೌಡ ಉದ್ಲಡ್ಡ, ಅರ್ಚಕ ಗಣಪತಿ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಕಾಶ್ ಗೌಡ ಅರುವ, ವೆಂಕಪ್ಪ ಗೌಡ ಕಂಪ, ವಸಂತ ಕುಂಬಾರ ಕೊಪ್ಪ, ಸುಮಲತಾ ದೇವಸ್ಯ, ಸುಲೋಚನಾ ಮಿಯೋಳ್ಪೆ, ಕಿನ್ನಿಗ ಓಡದಕೆರೆ ಉಪಸ್ಥಿತರಿದ್ದರು. ಧ್ರುವಿ ಬಾಕಿಲ, ಹಂಸಿಕಾ ಪ್ರಾರ್ಥಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ವಿಶ್ವನಾಥ ಅಂಬುಲ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಕಾಶ್ ಗೌಡ ಅರುವ ವಂದಿಸಿದರು. ಜತೆ ಕಾರ್ಯದರ್ಶಿ ವಿಜಿತ್ ಮಾಚಿಲ, ಪ್ರಶಾಂತ್ ಅಂಬುಲ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ ಕಾರ್ಯಕ್ರಮ: ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮೋನಪ್ಪ ಗೌಡ ಉಳವ, ಪುತ್ತೂರು ಪಿಎಂಜಿಎಸ್ ವೈ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪದ್ಮರಾಜ್ ಗೌಡ ನಾಣಿಲ ಹಾಗೂ ಉದಯ ಕುಮಾರ್ ಭಟ್, ಕುಮಾರಸ್ವಾಮಿ ಭಟ್‌ರವರನ್ನು ಸನ್ಮಾನಿಸಲಾಯಿತು.

ಹೊರೆಕಾಣಿಕೆ ಸಮರ್ಪಣೆ:

ಬೆಳಿಗ್ಗೆ ಅರುವಗುತ್ತು ಮನೆಯಿಂದ ದೇವರ ಆಭರಣ ತರುವುದು, ನಾಲ್ಕಂಭ ಕ್ಷೇತ್ರದಲ್ಲಿ ಪ್ರಾರ್ಥನೆ, ಹೊರೆಕಾಣಿಕೆ ತರುವುದು, ದೇವಳದಲ್ಲಿ ತೋರಣ ಮುಹೂರ್ತ, ಮಹಾಪೂಜೆ, ಸಂಜೆ ತಂತ್ರಿ ಪರಿವಾರದವರ ಆಗಮನ, ಸ್ವಾಗತ, ರಾತ್ರಿ ಪ್ರಸಾದ ಪರಿಗ್ರಹ, ಪುಣ್ಯಾಹ, ಅಂಕುರಾರ್ಪಣೆ, ವಾಸ್ತು ರಾಕ್ಷೆಘ್ನ ಹೋಮ, ವಾಸ್ತು ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಬಳಿಕ ನಡೆದ ಸಾಂಸ್ಕತಿಕ ಕಾರ್ಯಕ್ರಮದಲ್ಲಿ ನಾಣಿಲ, ಮುದುವ ಅಂಗನವಾಡಿ ಪುಟಾಣಿಗಳು ಹಾಗೂ ನಾಣಿಲ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನೃತ್ಯ ಮತ್ತು ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು.

ಜ.1ರಂದು ಬೆಳಿಗ್ಗೆ ಗಣಪತಿ ಹೋಮ, ಅಂಕುರಪೂಜೆ, ಬಿಂಬಶುದ್ಧಿ, ಕಲಶಪೂಜೆ, ಕಲಶಾಭಿಷೇಕ, ಸ್ಕಂದ ಪ್ರಾಯಶ್ಚಿತ ಹೋಮ, ಪ್ರೋಕ್ಷ ಹೋಮ, ಹೋಮ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಅಂಕುರಪೂಜೆ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮದಲ್ಲಿ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ ಅಧ್ಯಕ್ಷತೆ ವಹಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಕರಂದ್ಲಾಜೆ, ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ಗ್ರಾ.ಪಂ.ಸದಸ್ಯರಾದ ತೇಜಕುಮಾರಿ ಉದ್ಲಡ್ಡ, ವಿಶ್ವನಾಥ ಕೊಪ್ಪ, ಪುತ್ತೂರು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಪ್ಪ ಅಂಗನವಾಡಿ ಕೇಂದ್ರ, ಕೊಪ್ಪ ಕಿರಿಯ ಪ್ರಾಥಮಿಕ ಶಾಲೆ ಮತ್ತು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here