




ಪುತ್ತೂರು:ಮುಂಡೂರು ಗ್ರಾಮದ ಅಜಲಾಡಿ ಉದಯಗಿರಿಯ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವಗಳಿ ಚಾಲನೆ ದೊರೆತಿದ್ದು ಡಿ.1ರಂದು ಅರ್ಧ ಏಕಾಹ ಭಜನೆ, ಸಂಜೆ ತಂತ್ರಿಗಳ ಆಗಮನ ಹಾಗೂ ವಿವಿಧ ವೈದಿಕ ಹಾಗೂ ತಾಂತ್ರಿಕ ವಿಧಿ ವಿಧಾನಗಳು ನೆರವೇರಿತು.




ಬೆಳಿಗ್ಗೆ ಪ್ರಾರಂಭಗೊಂಡ ಅರ್ಧ ಏಕಾಹ ಭಜನೆಯನ್ನು ಡಾ.ಪ್ರದೀಪ್ ಕುಮಾರ್ ಹಾಸ್ಪಿಟಲ್ ಆಫ್ ಆರ್ಯುವೇದ ಇದರ ಡಾ.ಪ್ರದೀಪ್ ಕುಮಾರ್ ದೀಪ ಬೆಳಗಿಸಿ ಚಾಲನೆ ನೀಡಿದರು. ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪ ಪುರಂದರ ಗೌಡ, ಸದಸ್ಯರಾದ ಅಶೋಕ್ ಕುಮಾರ್ ಪುತ್ತಿಲ, ಯಶೋಧ, ನರಿಮೊಗರು ಗ್ರಾ.ಪಂ ಉಪಾಧ್ಯಕ್ಷ ಸುಧಾಕರ ಕುಲಾಲ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ಬೊಲ್ಲಗುಡ್ಡೆ, ಕೋಶಾಧಿಕಾರಿ ಅನಿಲ್ ಕುಮಾರ್ ಕಣ್ಣಾರ್ನೂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಭಜನಾ ಮಂಡಳಿಗಳು ಅರ್ಧ ಏಕಾಹ ಭಜನೆಯಲ್ಲಿ ಸಹಕರಿಸಿದರು.





ಸಂಜೆ ಕ್ಷೇತ್ರದ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ನಡೆದ ಬಳಿಕ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಕ್ಷೆಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ದಿಕ್ಪಾಲಬಲಿ, ಬಿಂಬಾಧಿವಾಸ, ಅನ್ನಸಂತರ್ಪಣೆ ನಡೆಯಿತು.
ಇಂದು ದೈವಗಳ ಪ್ರತಿಷ್ಠೆ: ಕ್ಷೇತ್ರದಲ್ಲಿ ಜ.೧ರಂದು ಬೆಳಿಗ್ಗೆ ಗಣಹೋಮ, ಕಲಶಪೂಜೆ, ದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ, ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಜಿಲ್ಲೆಯ ಪ್ರತಿಷ್ಠಿತ ಕಲಾವಿದರಿಂದ ಸಾಂಸ್ಕೃತಿಕ ವೈಭವ ಜರುಗಲಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.









