ರಜತ ಮಹೋತ್ಸವಕ್ಕೆ ಚಾಲನೆ – ವರ್ಷವಿಡೀ ಹಲವು ಕಾರ್ಯಕ್ರಮಗಳ ಆಯೋಜನೆ
ಕಾವು ಬುಶ್ರಾ ವಿದ್ಯಾಸಂಸ್ಥೆಗಳ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ ಹಾಗೂ ರಜತ ಮಹೋತ್ಸವ ಕಾರ್ಯಕ್ರಮ ಡಿ.31 ರಂದು ಶಾಲಾ ಆವರಣದಲ್ಲಿ ನಡೆಯಿತು.
ಬೆಳಿಗ್ಗೆ ಏಷ್ಯನ್ ವುಡ್ ಮತ್ತು ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಾಲಕ ಜನಾಬ್ ಜಬ್ಬಾರ್ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಬಳಿಕ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದ ಸುಂದರ ರೈ ಮಂದಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಶಾಲಾ ಶಿಕ್ಷಕ ರಕ್ಷಕ ಸಂಘದ ಪೂರ್ವಾಧ್ಯಕ್ಷ ಶಶಿಧರ ರಾವ್ ಬೊಳಿಕ್ಕಳ, ಜನಾಬ್ ನೂರುದ್ದೀನ್ ಉಪಸ್ಥಿತರಿದ್ದರು.
ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬುಶ್ರಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಜನಾಬ್ ಅಬ್ದುಲ್ ಅಜೀಜ್ ಬುಶ್ರಾ ವಹಿಸಿದ್ದರು. ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ರಜತ ಮಹೋತ್ಸವದ ನೂತನ ಲೋಗೋ ವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಶುಭಹಾರೈಸಿದರು.
ಪುತ್ತೂರು ಉಪವಿಭಾಗದ ಪೋಲಿಸ್ ಉಪ ಅಧೀಕ್ಷಕ ಡಾ.ವೀರಯ್ಯ ಹಿರೇಮಠ್ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ವಿಟಿಯು ಕಾರ್ಯಕಾರಿ ಸಮಿತಿ ಸದಸ್ಯ ಡಾ.ಉಜ್ವಲ್ ಯು.ಜೆ, ಮಣಿಪಾಲ್ ಗ್ರೂಪ್ಸ್‌ನ ಜನಾಬ್ ಖಲಂದರ್ ಶಾಫಿ ಭಾಗವಹಿಸಿದರು. ಜೇಸಿಐ ವಲಯ ತರಬೇತುದಾರ ಪ್ರದೀಪ್ ಬಾಕಿಲ ದಿಕ್ಸೂಚಿ ಭಾಷಣ ಮಾಡಿದರು. ಶಾಲಾ ಶಿಕ್ಷಕ ರಕ್ಷಕ ಸಂಘದ ನಿಕಟಪೂರ್ವಾಧ್ಯಕ್ಷ ಐ.ಸಿ.ಕೈಲಾಸ್ ಗೌರವ ಉಪಸ್ಥಿತರಿದ್ದು ಶುಭಹಾರೈಸಿದರು.
ವೇದಿಕೆಯಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಖಾದರ್ ಹೀರಾ, ಶಾಲಾ ಆಡಳಿತ ಅಧಿಕಾರಿ ಬದ್ರುದ್ಧೀನ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಶಾಲಾ ವಿದ್ಯಾರ್ಥಿ ನಾಯಕ ಶ್ರುಧನ್ ಆಳ್ವ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಡಾ.ಕೆ.ವಿ.ರೇಣುಕಾ ಪ್ರಸಾದ್, ಐ.ಸಿ.ಕೈಲಾಸ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥೆಯ ಶಿಕ್ಷಕರು ಹಾಗೂ ಶಾಲಾ ವಾಹನ ಚಾಲಕರು ಪ್ರತ್ಯೇ ಪ್ರತ್ಯೇಕವಾಗಿ ಸಂಸ್ಥೆಯ ಅಧ್ಯಕ್ಷ ಜನಾಬ್ ಅಬ್ದುಲ್ ಅಜೀಜ್ ಅವರನ್ನು ಗೌರವಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಅಮರನಾಥ್ ಬಿ.ಪಿ ಶಾಲಾ ವಾರ್ಷಿಕ ವರದಿ ವಾಚಿಸಿದರು.
ಶಾಲಾ ಉಪ ಮುಖ್ಯೋಪಾಧ್ಯಾಯಿನಿ ಶ್ರೀಮತಿ ದೀಪಿಕಾ ಚಾಕೊಟೆ ಸ್ವಾಗತಿಸಿ ಶಿಕ್ಷಕಿ ಜುಬೈದಾ ವಂದಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಹಾಗೂ ಸಿಬ್ಬಂದಿ ರಶೀದ್ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮಕ್ಕೆ ಮೊದಲು ಹಾಗೂ ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕೆ.ವಿ.ಜಿ ಡೆಂಟಲ್ ಕಾಲೇಜ್‌ನಿಂದ ಉಚಿತ ದಂತ ತಪಾಸಣೆ ಶಿಬಿರ ಹಾಗೂ ನುರಿತ ತಂತ್ರಜ್ಞರಿಂದ ಉಚಿತ ಕಂಪ್ಯೂಟರ್ ತರಬೇತಿ ಆಯೋಜನೆ : ಡಾ.ಕೆ.ವಿ.ರೇಣುಕಾಪ್ರಸಾದ್ ಘೋಷಣೆ
ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವ ಬುಶ್ರಾ ವಿದ್ಯಾಸಂಸ್ಥೆಯು ಮುಂದಿನ 1ವರ್ಷ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇ ಶಿಸಿದ್ದು ಇದಕ್ಕೆ ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಹಾಗೂ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಸಾಥ್ ನೀಡಿದ್ದಾರೆ. ತಮ್ಮ ಸಂಸ್ಥೆಯಾದ ಕೆ.ವಿ.ಜಿ ಡೆಂಟಲ್ ಕಾಲೇಜಿನಿಂದ ಮೊಬೈಲ್ ಡೆಂಟಲ್ ಕ್ಲಿನಿಕ್ ಮೂಲಕ ನುರಿತ ವೈದ್ಯರಿಂದ ನಾಲ್ಕು ಬಾರಿ ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಉಚಿತ ಹಲ್ಲಿನ ತಪಾಸಣೆ ಶಿಬಿರ ಆಯೋಜನೆ ಮಾಡಲಾಗುವುದೆಂದು ಘೋಷಿಸಿದರು.
ಅಲ್ಲದೆ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ನುರಿತ ಉಪನ್ಯಾಸಕರಿಂದ ಶಾಲಾ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ಕಾರ್ಯಗಾರ, ಸಂಸ್ಥೆಯಲ್ಲಿ ಕಲಿತ ಬಡ ವಿದ್ಯಾರ್ಥಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ನಮ್ಮ ಸಂಸ್ಥೆಗೆ ಬಂದಲ್ಲಿ ಶುಲ್ಕದಲ್ಲಿ ರಿಯಾಯಿತಿ ಕೊಡಲಾಗುವುದೆಂದು ತಿಳಿಸಿದರು.