ಧರ್ಮ, ಸಂಸ್ಕೃತಿ ಉಳಿಸಿಕೊಳ್ಳಬೇಕಾದರೆ ನಂಬಿಕೆ, ಭಾವನೆಗಳು ನಮ್ಮಲ್ಲಿ ಬರಬೇಕು-ಎಸ್.ಅಂಗಾರ
ಕಾಣಿಯೂರು: ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದರೆ ನಂಬಿಕೆ, ಭಾವನೆಗಳು ನಮ್ಮಲ್ಲಿ ಬರಬೇಕು. ದೇವಸ್ಥಾನದ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಅನುದಾನ ಒದಗಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.
ಅವರು ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಹಾಗೂ ನೇಮೋತ್ಸವದ ಪ್ರಯುಕ್ತ ಜ.1ರಂದು ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ ಅಧ್ಯಕ್ಷತೆ ವಹಿಸಿದ್ದರು. ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ಗ್ರಾ.ಪಂ.ಸದಸ್ಯರಾದ ತೇಜಕುಮಾರಿ ಉದ್ಲಡ್ಡ, ವಿಶ್ವನಾಥ ಕೊಪ್ಪ, ಪುತ್ತೂರು ಪಿಎಲ್ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ ಅತಿಥಿಗಳಾಗಿ ಭಾಗವಹಿಸಿದ್ದರು. ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಗಣಪತಿ ಭಟ್, ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಪಂಗಡ ಸಂಚಾಲಕ ಸುಂದರ ಗೌಡ ದೇವಸ್ಯ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷೆ ಚಂದ್ರಕಲಾ ಜಯರಾಮ್ ಅರುವಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಂ. ವೆಂಕಪ್ಪ ಗೌಡ ಮಾಚಿಲ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಯು.ಪಿ ರಾಮಕೃಷ್ಣ ಗೌಡ ಗುಜ್ಜರ್ಮೆ, ಅಧ್ಯಕ್ಷ ಪ್ರದೀಪ್ ಆರ್ ಗೌಡ ಅರುವಗುತ್ತು, ಉಪಾಧ್ಯಕ್ಷರಾದ ಪ್ರವೀಣ್ ಕುಂಟ್ಯಾನ, ವಿಜಯಕುಮಾರ್ ಸೊರಕೆ, ಕಾರ್ಯದರ್ಶಿ ಜತ್ತಪ್ಪ ಗೌಡ ಉದ್ಲಡ್ಡ, ಉಪ ಕಾರ್ಯದರ್ಶಿ ವಿಜಿತ್ ಮಾಚಿಲ, ಕೋಶಾಽಕಾರಿ ವಿಶ್ವನಾಥ ಮಾಚಿಲ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅರ್ಚಕ ಗಣಪತಿ ಭಟ್, ಪ್ರಕಾಶ್ ಗೌಡ ಅರುವ, ವೆಂಕಪ್ಪ ಗೌಡ ಕಂಪ, ವಸಂತ ಕುಂಬಾರ ಕೊಪ್ಪ, ಸುಮಲತಾ ದೇವಸ್ಯ, ಸುಲೋಚನಾ ಮಿಯೋಳ್ಪೆ, ಕಿನ್ನಿಗ ಓಡದಕೆರೆ ಉಪಸ್ಥಿತರಿದ್ದರು. ಆಡಳಿತ ಪಂಗಡ ಕಾರ್ಯದರ್ಶಿ ಜನಾರ್ದನ ಗೌಡ ಕೆಳಗಿನಕೇರಿ ಸ್ವಾಗತಿಸಿ, ಪ್ರಶಾಂತ್ ಅಂಬುಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮಗಳು: ಜ.1ರಂದು ಬೆಳಿಗ್ಗೆ ಗಣಪತಿ ಹೋಮ, ಅಂಕುರಪೂಜೆ ಬಿಂಬಶುದ್ಧಿ, ಕಲಶಪೂಜೆ, ಬಿಂಬಶುದ್ಧಿ ಕಲಶಾಭಿಷೇಕ, ಸ್ಕಂದ ಪ್ರಾಯಶ್ಚಿತ ಹೋಮ, ಪ್ರೋಕ್ಷ ಹೋಮ, ಹೋಮ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಅಂಕುರಪೂಜೆ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಪ್ಪ ಅಂಗನವಾಡಿ ಕೇಂದ್ರ, ಕೊಪ್ಪ ಕಿರಿಯ ಪ್ರಾಥಮಿಕ ಶಾಲೆ ಮತ್ತು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು.
ಇಂದು ಕ್ಷೇತ್ರದಲ್ಲಿ
ಜ.2ರಂದು ಬೆಳಿಗ್ಗೆ ಗಣಪತಿ ಹೋಮ, ಶಾಂತಿ ಹೋಮ, ಸ್ವಶಾಂತಿ, ಘೋರ ಶಾಂತಿ, ಅದ್ಬುತ ಶಾಂತಿ, ಹೋಮ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಅಂಕುರಪೂಜೆ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶ್ವ ಮೋಹನ ನೃತ್ಯ ಕಲಾ ಶಾಲೆಯ ಕಡಬ-ಆಲಂಕಾರು ಶಾಖೆಯ ವಿದುಷಿ ಮಾನಸ ಪುನೀತ್ ರೈ ಇವರ ನಿರ್ದೇಶನದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.