ಬಿಹಾರ: ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎಂಬ ಕಮಲ್ನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಸ್ವೀಕರಿಸಲು ನಮ್ಮ ಅಭ್ಯಂತರವಿಲ್ಲ. ಈ ವಿಚಾರದಲ್ಲಿ ವಿರೋಧಪಕ್ಷಗಳು ಒಮ್ಮತ ಮೂಡಿಸಬೇಕು ಎಂದು ಹೇಳಿದ್ದಾರೆ. ಇದೇ ವೇಳೆ ಅಮೃತ ಫಡ್ನವೀಸ್ ಅವರ ಮೋದಿ ನವಭಾರತದ ರಾಷ್ಟ್ರಪಿತ ಎಂಬ ಹೇಳಿಕೆ ಕುರಿತು ಹೊಸ ಭಾರತದ ಹೊಸ ತಂದೆ ಭಾರತಕ್ಕಾಗಿ ಏನು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಭಾರತ್ ಜೋಡೊ ಯಾತ್ರೆ ವಿಪಕ್ಷಗಳ ಒಗ್ಗಟ್ಟಿಗೆ ವೇದಿಕೆಯಾಗಲಿ ಎಂದು ರಾಹುಲ್ ಗಾಂಧಿ ಕರೆನೀಡಿದ್ದರು.