ನೆಕ್ಕಿಲಾಡಿ ಶಾಲಾ ವಾರ್ಷಿಕೋತ್ಸವ: ಶುದ್ಧ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ಗುರುವಂದನೆ, ಸನ್ಮಾನ

0

ಪುತ್ತೂರು: 34 ನೆಕ್ಕಿಲಾಡಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ದ.31ರಂದು ನಡೆಯಿತು.
34 ನೆಕ್ಕಿಲಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವದ ಸಂಭ್ರಮಕ್ಕೆ ಬೆಳಿಗ್ಗೆ ನಮ್ಮೂರು ನೆಕ್ಕಿಲಾಡಿಯ ಅಧ್ಯಕ್ಷ ಎ.ಜತಿಂದ್ರ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು. ನಂತರ ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳಿಂದ ಲೋಟಸ್ ಪ್ರದರ್ಶನ ಹಾಗೂ ವಿವಿಧ ವಿನೋದಾವಳಿ ಜರಗಿತು.


ಈ ವೇಳೆ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೀವ ನಾಯ್ಕರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ‌ ಮುಖ್ಯ ಅತಿಥಿಗಳಾಗಿದ್ದ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಕುಮಾರ್, ವೇದಾವತಿ, ಸುಜಾತ ಆರ್. ರೈ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್ ಸಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಿನಂಗಡಿ ವಲಯದ ಮೇಲ್ವಿಚಾರಕ ಚಂದ್ರಶೇಖರ, ಅಂಬೆಲ‌ ರಾಜಶ್ರೀ ಫ್ರೆಂಡ್ಸ್ ಅಧ್ಯಕ್ಷ ರತ್ನಾಕರ, ಮೈಂದಡ್ಕ ನಮ್ಮೂರು ನಮ್ಮವರು ಸಂಸ್ಥೆಯ ಅಧ್ಯಕ್ಷ ಗಣೇಶ್ ನಾಯಕ್, ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್.ಎಂ.ಜಿ ಮತ್ತು ಎಸ್. ಡಿ.ಎಂ.ಸಿ. ಒಕ್ಕೂಟದ ರಾಜ್ಯಾಧ್ಯಕ್ಷ ಮೊಯಿದಿನ್ ಕುಟ್ಟಿ ಶುಭ ಹಾರೈಸಿದರು. ಪ್ರಭಾರ ಮುಖ್ಯಗುರು ಕಾವೇರಿ ಸಿ. ಸ್ವಾಗತಿಸಿ, ಸಹ ಶಿಕ್ಷಕಿ ಪದ್ಮ ವಂದಿಸಿದರು.ಅತಿಥಿ ಶಿಕ್ಷಕಿ ಚಿತ್ರ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿಯರಾದ ಉಷಾ ಕುಮಾರಿ, ಪೂರ್ಣಿಮಾ ಮತ್ತು ಗೀತಾ ಟಿ. ಎಸ್. ಮಕ್ಕಳ ಬಹುಮಾನ ವಿತರಣೆಯ ಪಟ್ಟಿ ವಾಚಿಸಿದರು. ಸಭೆಯ ಬಳಿಕ ಅಂಗನವಾಡಿ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಚಿತ್ರ ಹಾಗೂ ಪೂರ್ಣಿಮಾ ಶಾಲಾ ಮಕ್ಕಳ ಹಾಗೂ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಅಂಗನವಾಡಿ ಮಕ್ಕಳಿಗಾಗಿ ಆಯೋಜಿಸಿದ್ದ ಛಧ್ಮವೇಷದ ಕಾರ್ಯಕ್ರಮ ನಿರ್ವಹಿಸಿದರು.

ಶಾಸಕ ಸಂಜೀವ ಮಠಂದೂರು ಆಗಮಿಸಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿದರು. ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಆಗಮಿಸಿ ಶುಭ ಹಾರೈಸಿದರು.

ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ಸಂಜೆ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಎನ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ
ಸಪ್ನ ಜೀವನ್ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು. ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಗುರು ವೃoದದವರಿಗೆ ಕಾರ್ಯಕ್ರಮದಲ್ಲಿ ಗುರುವಂದನೆ ಸಲ್ಲಿಸಲಾಯಿತು.‌

ದಾನಿಗಳಾದ ಎ. ಜತಿಂದ್ರ ಶೆಟ್ಟಿ ಹಾಗೂ ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಧರ್ಣಪ್ಪ ಗೌಡರವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಪ್ರಗತಿಪರ ಕೃಷಿಕ ರಾಜೀವ ಪೂಜಾರಿ ಇಪ್ಪನೊಟ್ಟು ಮತ್ತು ಆದರ್ಶನಗರ ಮಸೀದಿಯ ಅಧ್ಯಕ್ಷ ಅಮೀರ್ ಜಾನ್ ಸಾಹೇಬ್ ಅವರನ್ನು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯ ಹರೀಶ್ ದರ್ಬೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ಎಂ .ಜಿ, ನಿವೃತ್ತ ಮುಖ್ಯಗುರು ರುಕ್ಮಿಣಿ, ನಮ್ಮೂರು ನೆಕ್ಕಿಲಾಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಯುನಿಕ್ ಅಬ್ದುಲ್ ರಹಿಮಾನ್, ಎಸ್.ಡಿ.ಎಂ.ಸಿ.‌ ಅಧ್ಯಕ್ಷ ರಾಜೀವ ನಾಯ್ಕ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ಜಾಸ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯಗುರು ಕಾವೇರಿ ಸಿ. ವಾರ್ಷಿಕ ವರದಿ ವಾಚಿಸಿದರು. ಸಹ ಶಿಕ್ಷಕಿ ಪದ್ಮ ಸ್ವಾಗತಿಸಿದರು. ಗೌರವ ಶಿಕ್ಷಕಿ ಗೀತಾ ಟಿ.ಎಸ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಒಂದರಿಂದ ಏಳನೇ ತರಗತಿಯ ಪಠ್ಯ ವಿಷಯಗಳಲ್ಲಿ ಬಹುಮಾನ ಗ ಳಿಸಿದ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಅತಿಥಿಗಳು ಬಹುಮಾನ ವಿತರಿಸಿದರು.

ಸಹ ಶಿಕ್ಷಕಿ ಪದ್ಮ ವಂದಿಸಿದರು.‌ ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ”ಏತ್ ಪಂಡಲ ಆತೆ” ನಾಟಕ ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here