ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ.1976 ಕೋಟಿ ಬಿಡ್ ಆಹ್ವಾನ ; ಸಂಸದ ನಳಿನ್‌ರಿಗೆ ನಿತಿನ್ ಗಡ್ಕರಿ ಪತ್ರ

0

ಮಂಗಳೂರು:ಶಿರಾಡಿ ಘಾಟ್ ವಿಭಾಗದ ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ.1976 ಕೋಟಿ ಮೊತ್ತದ ಬಿಡ್‌ನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಚತುಷ್ಪಥ ಕಾಮಗಾರಿ ಜತೆಗೆ ಮಂಗಳೂರು- ಬೆಂಗಳೂರು ನಡುವಿನ ಸಂಚಾರಕ್ಕೆ ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡಲಿರುವ ಶಿರಾಡಿ ಘಾಟ್ ಟನಲ್ ಯೋಜನೆಯನ್ನು ರೂ. 15,000 ಕೋಟಿ ವೆಚ್ಚದಲ್ಲಿ 23 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಏಪ್ರಿಲ್, 2023 ರೊಳಗೆ ಡಿಪಿಆರ್ ಅನ್ನು ಅಂತಿಮಗೊಳಿಸಿ ಮೇ 2023ರಲ್ಲಿ ಬಿಡ್‌ಗಳನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ. ಸಕಲೇಶಪುರದಿಂದ ಮಾರನಹಳ್ಳಿಯ ಭಾಗದ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಕೂಡಲೇ ದುರಸ್ತಿ ಮಾಡಲು ನಿರ್ಧರಿಸಲಾಗಿದ್ದು, ದುರಸ್ತಿ ಕಾಮಗಾರಿಗೆ ರೂ.12.20 ಕೋಟಿ ಬಿಡ್ ನ ಮೌಲ್ಯಮಾಪನ ಮಾಡಲಾಗುತ್ತಿದೆ. ಅಲ್ಲದೆ, ಅಸ್ತಿತ್ವದಲ್ಲಿರುವ ರಸ್ತೆ ನಿರ್ವಹಣೆಗೆ ಗುತ್ತಿಗೆದಾರರು ಪ್ಯಾಚ್ ವರ್ಕ್ ದುರಸ್ತಿಗೆ ಮುಂದಾಗಿದ್ದಾರೆ ಎಂದು ಗಡ್ಕರಿ ಅವರು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here