ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಹಾ ಚಂಡಿಕಾಯಾಗ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಮಹಾ ಚಂಡಿಕಾಯಾಗವು ಜ.3 ರಂದು ಜರಗಿತು.


ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗ, ಕಲಶ ಪೂಜೆ ಪ್ರಾರಂಭಗೊಂಡಿತು. ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ನಾಗದೇವರಲ್ಲಿ ತಂಬಿಲ ಸೇವೆ, ದೈವಗಳಿಗೆ ತಂಬಿಲ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂರ್ಪಣೆ ಜರಗಿತು. ಅದೇ ದಿನ ಶನಿವಾರ ಬೆಳಿಗ್ಗೆ ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತದವರೆಗೆ ಅರ್ಧ ಏಕಾಹ ಭಜನೆ ಹಾಗೂ ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನೆರವೇರಿತು.


ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಭಜನಾ ಕಾರ್ಯಕ್ರಮವು ನೆರವೇರಿತು. ಈ ಪುಣ್ಯ ಕಾರ್ಯದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಮೋಹನ್ ರೈ ಮಿಶನ್‌ಮೂಲೆ, ಕಾರ್ಯದರ್ಶಿ ಕೆ.ಬಿ ಶೇಖರ್, ಪ್ರಭಾರ ಅಧ್ಯಕ್ಷ ರಾಮ ಶೆಟ್ಟಿ, ಜೊತೆ ಕಾರ್ಯದರ್ಶಿ ಲಕ್ಷ್ಮಣ ಶೆಟ್ಟಿ, ಕೋಶಾಧಿಕಾರಿ ಮೋಹನ್ ಕುಮಾರ್, ಲೆಕ್ಕಪರಿಶೋಧಕರಾದ ಬಿ.ವಿಶ್ವನಾಥ್ ರೈಯವರು ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡು, ಅನ್ನಪ್ರಸಾದವನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here