





ಕಾಣಿಯೂರು: ಜಿಲ್ಲಾ ಪಂಚಾಯತ್ ಶಿವಮೊಗ್ಗ, ತಾಲೂಕು ಪಂಚಾಯತ್ ಶಿವಮೊಗ್ಗ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ ಮೋನಿಷ್ ತಂಟೆಪ್ಪಾಡಿ ಪಂಚಮ ಸ್ಥಾನಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.








ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ವಿಶ್ವನಾಥ ಮತ್ತು ದಯಾಮಣಿ ದಂಪತಿಗಳ ಪುತ್ರರಾಗಿರುವ ಮೊನಿಷ್ ಇವರಿಗೆ ಯೋಗ ಗುರು ಶರತ್ ಮರ್ಗಿಲಡ್ಕ ಇವರು ಮಾರ್ಗದರ್ಶನ ನೀಡಿರುತ್ತಾರೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ.ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಾಲಾ ಮುಖ್ಯಗುರು ಸರಸ್ವತಿ.ಎಂ ಮತ್ತು ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದರು.


 
            