ಬೆಂಗಳೂರು: ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಸೇರಿದಂತೆ ಪೊಲೀಸರು ದೇವರ ಪಲ್ಲಕ್ಕಿ ಹೊತ್ತು ಪ್ರದಕ್ಷಿಣೆ ಹಾಕಿರುವ ಪ್ರಸಂಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಜ.3ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಾಲಯಕ್ಕೆ ಭೇಟಿ ಕಾರ್ಯಕ್ರಮ ನಿಗದಿಯಾಗಿತ್ತು. ಅದಕ್ಕಾಗಿ ಪೊಲೀಸರನ್ನು ನೇಮಿಸಿ ಬಂದೋಬಸ್ತ್ ಕೂಡ ಮಾಡಲಾಗಿತ್ತು. ಆದರೆ ಸಿದ್ಧೇಶ್ವರ ಶ್ರೀಗಳ ನಿಧನದ ಕಾರಣ ಸಿಎಂ ಕಾರ್ಯಕ್ರಮ ರದ್ದಾಗಿತ್ತು. ಈ ಹಿನ್ನಲೆಯಲ್ಲಿ ಖಾಲಿ ಕುಳಿತಿದ್ದ ಪೊಲೀಸರು ದೇವಸ್ಥಾನದಲ್ಲಿ ಭಜನೆ ಮಾಡಿ ದೇವರ ಪಲ್ಲಕ್ಕಿ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದಾರೆ. ಪೊಲೀಸ್ ಇಲಾಖೆಯ ನೀತಿ ನಿಯಮಗಳನ್ನು ಉಲ್ಲಂಘನೆ ಮಾಡಿ ಪೊಲೀಸರು ಧಾರ್ಮಿಕ ಆಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಕೆಲವರು ಅಸಮಧಾನ ವ್ಯಕ್ತಪಡಿಸಿದ್ದಾರೆ.