Saturday, February 4, 2023

Homeಕ್ರೈಂ ನ್ಯೂಸ್ವಿಟ್ಲ: ಬೈಕ್ ಡಿಕ್ಕಿ-ಶಾಲಾ ಬಾಲಕಿಗೆ ಗಂಭೀರ ಗಾಯ

ವಿಟ್ಲ: ಬೈಕ್ ಡಿಕ್ಕಿ-ಶಾಲಾ ಬಾಲಕಿಗೆ ಗಂಭೀರ ಗಾಯ

ಬಂಟ್ವಾಳ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ.


ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿ. ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು ಬಾಲಕಿಯನ್ನು ಎಳೆದುಕೊಂಡು ಹೋಗಿದೆ. ತಕ್ಷಣವೇ ಸ್ಥಳೀಯರು ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ವಿಟ್ಲ-ಕಲ್ಲಡ್ಕ ರಸ್ತೆ ಅಗಲೀಕರಣಗೊಂಡು ಡಾಮರೀಕರಗೊಂಡಿದ್ದು, ವಾಹನಗಳು ಮಿತಿಮೀರಿದ ವೇಗದಲ್ಲಿ ಚಲಿಸುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

LEAVE A REPLY

Please enter your comment!
Please enter your name here

Must Read

spot_img
error: Content is protected !!