ಪಾಣಾಜೆ ಸುಬೋಧ ಪ್ರೌಢಶಾಲಾ ವಾರ್ಷಿಕ ಕ್ರೀಡೋತ್ಸವ

0

ನಿಡ್ಪಳ್ಳಿ;ಪಾಣಾಜೆ ಸುಬೋಧ ಪ್ರೌಢಶಾಲಾ 2022-23 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ಟರ ಅಧ್ಯಕ್ಷತೆಯಲ್ಲಿ ಡಿ.23 ರಂದು ಜರುಗಿತು.
    ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಬೋಧ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವೀಂದ್ರ ಭಂಡಾರಿಯವರು ಧ್ವಜಾರೋಹಣ ಮಾಡಿ ಕ್ರೀಡೆಯ ಮಹತ್ವವನ್ನು ವಿವರಿಸಿ ಶುಭ ಹಾರೈಸಿದರು.
     ಶಾಲಾ ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಐ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. 9ನೇ ತರಗತಿಯ ಗ್ರೀಷ್ಮ ಹಾಗೂ ದೀಪಿಕಾ ಪ್ರಾರ್ಥಿಸಿದರು.10ನೇ ತರಗತಿಯ ಕೀರ್ತನ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ಹಾಗೂ ಏರೋಬಿಕ್ಸ್ ಪ್ರದರ್ಶಿಸಲಾಯಿತು.ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಅವರು ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರು ಹಾಗೂ  ಶಿಕ್ಷಕೇತರ ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here