ಪುತ್ತೂರು: ಜ.೨೨ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಜರುಗಲಿರುವ ಶ್ರೀ ಆದಿಚುಂನಗಿರಿ ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಶ್ರೀಗಳ ೭೮ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಒಕ್ಕಲಿಗ ಸ್ವ ಸಹಾಯ ಸಂಘದ ಒಕ್ಕೂಟದ ಪದಾಧಿಕಾರಿಗಳ ಸಭೆಯು ಜ.೫ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು.
ಜಯಂತ್ಯೋತ್ವ ಸಂಸ್ಮರಣಾ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಗ್ರಾಮ ಗ್ರಾಮಗಳಲ್ಲಿ ಒಕ್ಕೂಟದ ಸಭೆಗಳನ್ನು ನಡೆಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡುವಂತೆ ಕರೆ ನೀಡಿದರು. ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ| ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘದ ಸದಸ್ಯರ ಪಾತ್ರದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಸಂಸ್ಮರಣಾ ಸಮಿತಿ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಒಕ್ಕಲಿಗ ಯುವ ಗೌಡ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ, ಒಕ್ಕಲಿಗ ಸ್ವಸಹಾಯ ಸಂಘದ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ, ಅಧ್ಯಕ್ಷ ಮನೋಹರ್ ಡಿ.ವಿ, ಕಾರ್ಯದರ್ಶಿ ದಿವ್ಯಪ್ರಸಾದ್ ಉಪಸ್ಥಿತರಿದ್ದರು. ಪುತ್ತೂರು ತಾಲೂಕಿನ ೪೨ ಒಕ್ಕೂಟದ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡರು.