ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮುಕ್ತಾಯ – ಪುತ್ತೂರು ಕ್ಷೇತ್ರದಲ್ಲಿ 2,08,272 ಮತದಾರರು

0

ಪುತ್ತೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಮನೆ ಮನೆ ಭೇಟಿ ಕಾರ್ಯ ನಡೆದಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮುಕ್ತಾಯವಾಗಿದೆ. ಇವತ್ತಿನ ತನಕದ ಪಟ್ಟಿಯಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,08,272 ಮಂದಿ ಮತದಾರರಿದ್ದಾರೆ ಎಂದು ಸಹಾಯಕ ಕಮಿಷನರ್ ಗಿರೀಶ್‌ನಂದನ್ ಅವರು ತಿಳಿಸಿದ್ದಾರೆ.

ಜ.5ರಂದು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ, ನೋಂದಾಯಿತ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದ ಅವರು ಮತದಾರರ ಮಾಹಿತಿ ನೀಡಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ನ.9ರಿಂದ ಡಿ.7ರವರೆಗೆ ಮತದಾರರಿಂದ ಬಂದಿದ್ದ ಆಕ್ಷೇಪಣೆಗಳನ್ನು ಸ್ವೀಕರಿಸಿ, ಬೂತ್‌ಮಟ್ಟದ ಅಧಿಕಾರಿಗಳು ಪ್ರತಿ ಮನೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಡಿ.9ರಿಂದ ಡಿ.26ರ ಅವಧಿಯಲ್ಲಿ ಮತದಾರರಿಂದ ಬಂದಿದ್ದ ಎಲ್ಲಾ ಆಕ್ಷೇಪಣೆಗಳನ್ನು ಸರಿಪಡಿಸಲಾಗಿದೆ ಎಂದು ಅವರು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ: ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಜಿಲ್ಲಾ ನೋಡೆಲ್ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಮತಗಟ್ಟೆ ವ್ಯಾಪ್ತಿಯಲ್ಲಿನ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಮತದಾರರಿಂದ ಅಭಿಪ್ರಾಯಗಳನ್ನು ಪಡೆದಿದ್ದಾರೆ. ಮತಗಟ್ಟೆಗಳ ಮತದಾರರಿಂದ ಈಗಾಗಲೇ ಬಂದಿರುವ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲಾಗಿದೆ. ಇದನ್ನು ಸರಕಾರಿ ವೆಬ್‌ಸೈಟ್‌ನಲ್ಲಿ ಮತದಾರರ ಭಾವಚಿತ್ರ ರಹಿತ ಪಟ್ಟಿಯನ್ನು ನೋಡಬಹುದು ಎಂದು ಅವರು ಮಾಹಿತಿ ನೀಡಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಬಿಎಲ್‌ಎಒನ್ ಇದರ ಹರೀಶ್ ಬಿಜತ್ರೆ, ಜೆಡಿಎಸ್ ಅಧ್ಯಕ್ಷ ಅಶ್ರಫ್ ಕಲ್ಲೇಗ, ಮಾಜಿ ಅಧ್ಯಕ್ಷ ಐ.ಸಿ.ಕೈಲಾಸ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕೆದುವಡ್ಕ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಮಾಜಿ ಪುರಸಭಾ ಸದಸ್ಯ ಇಸಾಕ್ ಸಾಲ್ಮರ ಉಪಸ್ಥಿತರಿದ್ದರು.

5262 ಮತದಾರರ ಸೇರ್ಪಡೆ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದೆ 2,05,200 ಮತದಾರರು ಇದ್ದು ಪರಿಶೀಲನೆ, ಸೇರ್ಪಡೆ ಬಳಿಕ ಇವತ್ತಿನ ತನಕದ ಪಟ್ಟಿಯಲ್ಲಿ 2,08,272 ಮತದಾರರು ಇದ್ದಾರೆ.ಒಟ್ಟು 5,263 ಮತದಾರರ ಹೆಸರು ಸೇರ್ಪಡೆಗೊಂಡಿದ್ದು 2,193 ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ.ಈ ಮೂಲಕ ಒಟ್ಟು 3,072 ಮತದಾರರು ಹೆಚ್ಚಳಗೊಂಡಿದ್ದು ಕ್ಷೇತ್ರದಲ್ಲಿ ಪ್ರಸ್ತುತ 2,08,272 ಮತದಾರರು ಪಟ್ಟಿಯಲ್ಲಿದ್ದಾರೆ. ಇದರಲ್ಲಿ 1,02,909 ಪುರುಷ ಮತದಾರರಾಗಿದ್ದು 1,05,363 ಮಂದಿ ಮಹಿಳೆಯರಾಗಿದ್ದಾರೆ.

ಎಸಿ ಗಿರೀಶ್ ನಂದನ್

LEAVE A REPLY

Please enter your comment!
Please enter your name here