ದ.ಕ.ಜಿಲ್ಲೆಯಲ್ಲಿ 17,37,688 ಮತದಾರರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಗಳೂರು:ದ.ಕ.ಜಿಲ್ಲೆಯ ಮತದಾರರ ಅಂತಿಮ ಪಟ್ಟಿಯನ್ನು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟಿಸಿದ್ದಾರೆ. ತನ್ನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ 23,57,852 ಜನಸಂಖ್ಯೆ ಇದ್ದು, ಅದರಲ್ಲಿ 17,37,688 ಮತದಾರರಿದ್ದಾರೆ. ಆ ಪೈಕಿ 8,50,552 ಪುರುಷ ಮತ್ತು 8,87,060 ಮಹಿಳಾ ಹಾಗೂ 76 ಮಂಗಳಮುಖಿಯರಿದ್ದಾರೆ ಎಂದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 2,42,186 ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 2,01,976 ಮತದಾರರಿದ್ದಾರೆ. 47,174 ಹೊಸ ಮತದಾರರ ಸೇರ್ಪಡೆಯಾಗಿದೆ. 18,441 ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. 18,678 ಮತದಾರರು ಕ್ಷೇತ್ರದಿಂದ ಕ್ಷೇತ್ರಕ್ಕೆ, ಜಿಲ್ಲೆಯಿಂದ ಜಿಲ್ಲೆಗಳಿಗೆ ವರ್ಗಾವಣೆಗೊಂಡವರ ಪಟ್ಟಿಯಲ್ಲಿ ಸೇರಿದ್ದಾರೆ ಎಂದು ಜಿಲ್ಲಾಽಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 25,259 ಯುವ ಮತದಾರರಿದ್ದಾರೆ. ಅಲ್ಲದೆ 13,706 ವಿಕಲಚೇತನರು, 6,392 ವಿವಿಐಪಿ, 546 ಸೇವಾ ಮತದಾರರು ಮತ್ತು 225 ಎನ್‌ಆರ್‌ಐ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ., ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.